ಮಡಿಕೇರಿ, ಡಿ. ೨೧: ಕೊಡಗು ಜಿಲ್ಲೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮೊದಲ ದಿನ ಒಟ್ಟು ೩೪,೭೩೬ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟಾರೆ ಶೇ.೧೦೬.೨ ಪ್ರಗತಿ ಸಾಧಿಸಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಒಟ್ಟು ೩೧,೧೦೦ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ನಗರ ಪ್ರದೇಶದಲ್ಲಿ ಒಟ್ಟು ೩,೬೩೬ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಮಡಿಕೇರಿ ತಾಲೂಕಿನಲ್ಲಿ ಒಟ್ಟು ೯,೭೦೩ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ ೭,೫೩೭, ನಗರ ಪ್ರದೇಶದಲ್ಲಿ ೨,೧೬೬ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಸೋಮವಾರಪೇಟೆ ತಾಲೂಕಿನಲ್ಲಿ ಒಟ್ಟು ೧೧,೯೯೧ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ೧೧,೬೬೭, ನಗರ ಪ್ರದೇಶದಲ್ಲಿ ೩೨೪ ಮಕ್ಕಳಿಗೆ ಲಸಿಕೆ ಹಾಕಲಾಗಿದೆ.
ವೀರಾಜಪೇಟೆ ತಾಲೂಕಿನಲ್ಲಿ ಒಟ್ಟು ೧೩,೦೪೨ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಈ ಪೈಕಿ ಗ್ರಾಮೀಣ ಪ್ರದೇಶದಲ್ಲಿ ೧೧,೮೯೬, ನಗರ ಪ್ರದೇಶದಲ್ಲಿ ೧,೧೪೬ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ.
ಮಡಿಕೇರಿಯಲ್ಲಿ ಚಾಲನೆ
ಜಿಲ್ಲಾ ಕೇಂದ್ರ ಮಡಿಕೇರಿಯ ಶಿಶುವಿಹಾರ ಕೇಂದ್ರದಲ್ಲಿ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ ಅವರು ಮಗುವಿಗೆ ಪೋಲಿಯೋ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ವಲಸಿಗ ಹಾಗೂ ಪ್ರವಾಸಿ ಮಕ್ಕಳು ಸೇರಿದಂತೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುತ್ತದೆ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ನೀಡಲಾಗುತ್ತಿದ್ದು. ಲಸಿಕೆ ಪಡೆಯದಿರುವ ಮಕ್ಕಳಿಗೆ ಲಸಿಕೆ ಕೊಡಿಸುವಂತೆ ಡಾ. ಸತೀಶ್ ಕುಮಾರ್ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಲೋಕೇಶ್, ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ, ಡಾ. ಸನತ್ ಕುಮಾರ್, ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಪುರುಷೋತ್ತಮ, ಡಾ. ಚೇತನ್, ಡಾ. ಸುಕೃತ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ದೇವರಾಜು, ಸವಿತಾ ಕೀರ್ತನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪಾಲಾಕ್ಷ, ರೋಟರಿ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಉತ್ತಯ್ಯ, ಲಯನ್ಸ್ ಸಂಸ್ಥೆಯ ಮದನ್, ಮಧುಕರ್, ನವೀನ್ ಅಂಬೆಕಲ್ಲು ಇತರರು ಇದ್ದರು. ಕಲಾವಿದ ಈ. ರಾಜು ಮತ್ತು ತಂಡದವರು ಪೋಲಿಯೋ ಲಸಿಕೆ ಮಹತ್ವ ಕುರಿತ ಜಾಗೃತಿ ಗೀತೆ ಹಾಡಿದರು.