ಮುಳ್ಳೂರು, ಡಿ. ೨೦: ಶಾಲೆಯಲ್ಲಿ ಶೌಚಾಲಯದ ಸಮಸ್ಯೆ, ಶಾಲೆ ಸುತ್ತಮುತ್ತ ಗಿಡಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಬೇಕು, ಶಾಲೆಗೆ ಬರಲು ವಾಹನದ ವ್ಯವಸ್ಥೆ ಕಲ್ಪಿಸಬೇಕು..ಹೀಗೆ ವಿದ್ಯಾರ್ಥಿಗಳು ಸಮಸ್ಯೆಗಳ ಪಟ್ಟಿಯನ್ನು ಅಧಿಕಾರಿಗಳ ಎದುರು ಅನಾವರಣ ಮಾಡಿದರು.
ಸಮೀಪದ ಕೊಡ್ಲಿಪೇಟೆ ಗ್ರಾ.ಪಂ.ಯ ಮಕ್ಕಳ ಗ್ರಾಮಸಭೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿನಿ ದೀಕ್ಷಾ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಕೊಡ್ಲಿಪೇಟೆ ಗ್ರಾ.ಪಂ. ಮತ್ತು ನಾವು ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ನಡೆಸಲಾದ ಮಕ್ಕಳ ಗ್ರಾಮಸಭೆಯಲ್ಲಿ ಕೊಡ್ಲಿಪೇಟೆ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಶೌಚಾಲಯ ಅವ್ಯವಸ್ಥೆಯಿಂದ ಕೂಡಿದೆ ಮತ್ತು ಶಾಲೆ ಸುತ್ತಮುತ್ತ ಗಿಡಗಂಟಿಗಳು ಬೆಳೆದಿದು,್ದ ಈ ಸಂಬAಧ ಗ್ರಾ.ಪಂ. ಇದÀನ್ನು ಸ್ವಚ್ಚಗೊಳಿಸುವಂತೆ ವಿದ್ಯಾರ್ಥಿನಿ ಪ್ರತೀಕ್ಷ ಮನವಿ ಮಾಡಿದರು.
ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿ ಜಿನಾಥ್ ಸಭೆಯ ಗಮನ ಸೆಳೆದರು. ಕೆಳಕೊಡ್ಲಿ ಗ್ರಾಮದಿಂದ ಶಾಲೆಗೆ ಬರಲು ದೂರವಾಗುತ್ತಿದ್ದು, ಈ ನಿಟ್ಟಿನಲ್ಲಿ ನಮಗೆ ಶಾಲೆಗೆ ಬರಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಿಕೊಡುವಂತೆ ವಿದ್ಯಾರ್ಥಿನಿ ಲಕ್ಷಿö್ಮ ಆಗ್ರಹಿಸಿದರು.
ಶಾಲಾ ಮುಂಭಾಗದಲ್ಲಿ ಸಂತೆ ನಡೆಯುವುದರಿಂದ ತ್ಯಾಜ್ಯಗಳು ಶಾಲಾ ಆವರಣದಲ್ಲಿ ಸಂಗ್ರಹಗೊAಡು ತೊಂದರೆಯಾಗುತ್ತಿದೆ. ಮರುದಿನ ತ್ಯಾಜ್ಯವನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿಕೊಂಡು ಸ್ವಚ್ಚಗೊಳಿಸಬೇಕಾಗುತ್ತದೆ ಎಂದು ಉರ್ದು ಪ್ರಾಥಮಿಕ ಶಾಲೆಯ ಮಕ್ಕಳು ಸಭೆಯಲ್ಲಿ ಪ್ರಸ್ತಾಪಿಸಿದರು. ಮಕ್ಕಳ ಗ್ರಾಮಸಭೆಗೆ ಸಂಬAಧಿಸಿದ ಅಧಿಕಾರಿಗಳು ಬಂದಿಲ್ಲ ಎಂದು ಸಭೆಯ ನಡೆಯುವ ಮೊದಲು ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಆಕ್ಷೇಪ ವ್ಯಕ್ತಪಡಿಸಿದಾಗ ಗ್ರಾ.ಪಂ.ಅಧ್ಯಕ್ಷ ಶೇಖರ್ ಅವರು ಸಂಬAಧಿಸಿದ ಇಲಾಖಾ ಅಧಿಕಾರಿಗಳು ಸಭೆಗೆ ಬರುವಂತೆ ಕರೆ ಮಾಡಿದರು. ನಂತರ ಸಭೆಗೆ ಹಾಜರಾದ ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು. ಕೆಳಕೊಡ್ಲಿ ಗ್ರಾಮದ ಅಂಗನವಾಡಿ ಶಿಕ್ಷಕಿ ನಮ್ಮ ಅಂಗನವಾಡಿ ಕಟ್ಟಡ ಹಾಳಾಗಿದ್ದು, ಹಾವು, ಚೇಳು ವಾಸ ಮಾಡುವಂತಿದೆ. ಇಲ್ಲಿ ಅಂಗನವಾಡಿ ನಡೆಸಲು ಸಾಧ್ಯವಾಗುತ್ತಿಲ್ಲ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು. ನಾವು ಪ್ರತಿಷ್ಠಾನ ಟ್ರಸ್ಟ್ನ ಗೌತಮ್ ಕಿರಗಂದೂರು ಮಕ್ಕಳಿಗೆ ಉಪಯುಕ್ತ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾ.ಪಂ. ಸದಸ್ಯರು, ವಿವಿಧ ಶಾಲಾ ಶಿಕ್ಷಕರು, ಗ್ರಾ.ಪಂ.ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.