ವೀರಾಜಪೇಟೆ, ಡಿ. ೨೧: ವೀರಾಜಪೇಟೆ ತಾಲೂಕಿನ ಕೆದಮುಳ್ಳೂರುವಿನಲ್ಲಿ ವಲಯ ಕಾಂಗ್ರೆಸ್ ಸಭೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ನಡಿಕೇರಿಯಂಡ ಮಹೇಶ್ ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕೆಡಿಪಿ ಸದಸ್ಯ ಮಾಳೇಟಿರ ಪ್ರಶಾಂತ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹಾಗೂ ಕೆಡಿಪಿ ಸದಸ್ಯರಾದ ಕೊಳುಮಾಂಡ ರಫೀಕ್, ಪಂಚಾಯಿತಿ ಸದಸ್ಯ ಇಸ್ಮಾಯಿಲ್, ಪ್ರಚಾರ ಸಮಿತಿಯ ಅಧ್ಯಕ್ಷ ಮತಿನ್, ಎಸ್ಸಿ ಘಟಕದ ಅಧ್ಯಕ್ಷ ಮಹದೇವ, ಮತ್ತು ಬೂತಿನ ಎಲ್ಲಾ ಅಧ್ಯಕ್ಷರುಗಳು ಮತ್ತು ಕಾಂಗ್ರೆಸ್ಸಿನ ಕಾರ್ಯಕರ್ತರು ಇದ್ದರು. ಅಧ್ಯಕ್ಷರ ಬದಲಾವಣೆ ಬಗ್ಗೆ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚೆ ನಡೆದ ಸಂದರ್ಭದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ನಡಿಕೇರಿಯಂಡ ಮಹೇಶ್ ಅವರನ್ನು ಮುಂದುವರಿಸಬೇಕಾಗಿ ತೀರ್ಮಾನಿಸ ಲಾಯಿತು. ಪಕ್ಷ ಸಂಘಟನೆಗೆ ಮತ್ತಷ್ಟು ಒತ್ತು ಕೊಡಬೇಕೆಂಬ ನಿರ್ದೇಶನವನ್ನು ಜಿಲ್ಲಾ ಕಾಂಗ್ರೆಸ್ ತಂಡ ನೀಡಿತು.