ಮಡಿಕೇರಿ, ಡಿ. ೨೩: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಅರೆಭಾಷೆ ಗೌಡ ವಿಕಾಸ ವೇದಿಕೆ(ಸಾಮಾಜಿಕ ಮಾಧ್ಯಮ ವಿಭಾಗ) ವತಿಯಿಂದ ಪ್ರೌಢಶಾಲಾ ಮಕ್ಕಳಿಗೆ ಅರೆಭಾಷೆ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವು ತಾ. ೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಭಾಗಮಂಡಲ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿವಾಕರ ಕುಂದಲ್ಪಾಡಿ, ಅರೆಭಾಷೆ ಗೌಡ ವಿಕಾಸ ವೇದಿಕೆಯ ನಿರ್ದೇಶಕ ಪ್ರಹ್ಲಾದ್ ಪೊಕ್ಕುಳಂಡ್ರ, ಅರೆಭಾಷೆ ಹಿರಿಯ ಸಾಹಿತಿ ಬೈತಡ್ಕ ಜಾನಕಿ ಬೆಳ್ಯಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.