ಮಡಿಕೇರಿ, ಡಿ. ೨೩: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪೆರಾಜೆ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟ ಮತ್ತು ಪೆರಾಜೆ ಗ್ರಾಮ ಗೌಡ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ‘ಅರೆಭಾಷೆ ಕೂಡ್‌ಕಟ್ಟ್’ ಕಾರ್ಯಕ್ರಮವು ತಾ.೨೪ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗೇಶ ಕುಂದಲ್ಪಾಡಿ, ಅರೆಭಾಷೆ ಸಾಹಿತಿ ಭವಾನಿಶಂಕರ ಹೊದ್ದೆಟ್ಟಿ, ಪೆರಾಜೆ ಗ್ರಾ.ಪಂ. ಮಟ್ಟದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಭವಾನಿ ಕೊಳಂಗಾಯ, ಪೆರಾಜೆ ಗ್ರಾಮ ಗೌಡ ಸಮಿತಿ ಅಧ್ಯಕ್ಷ ಕೆ.ಕೆ.ಪದ್ಮಯ್ಯ, ಪೆರಾಜೆ ಗ್ರಾ.ಪಂ.ಅಧ್ಯಕ್ಷ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ, ಗ್ಯಾರಂಟಿ ಅನುಷ್ಠಾನ ಸಮಿತಿ ಮಡಿಕೇರಿ ತಾಲೂಕು ಸದಸ್ಯ ಮನು ಪೆರುಮುಂಡ, ಇತರರು ಪಾಲ್ಗೊಳ್ಳಲಿದ್ದಾರೆ.

ಬೆಳಿಗ್ಗೆ ೧೧.೩೦ ಗಂಟೆಯಿAದ ವಿಚಾರಗೋಷ್ಠಿ-ಸಂವಾದ ಕಾರ್ಯಕ್ರಮ ನಡೆಯಲಿದೆ. ಸುಳ್ಯ ಬರಹಗಾರ ಲೋಕೇಶ್ ಕುಂಚಡ್ಕ ಅವರು ಅರೆಭಾಷೆ ಇಂದು ನಾಳೆ, ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಸಹಾಯಕ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಸಂಜೀವ ಕುದ್ಪಾಜೆ ಅವರು ಅರೆಭಾಷೆ ಗೌಡ್ರಲ್ಲಿ ಬದಲಾದ ಮದುವೆ ಕ್ರಮ ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ.

ಮಧ್ಯಾಹ್ನ ೨ ಗಂಟೆಯಿAದ ಸೋಬಾನೆ ಪದ ಮತ್ತು ಕವನ ವಾಚನ, ೩.೩೦ ಗಂಟೆಗೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಸಂಪಾಜೆ ಹೋಬಳಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಚಿದಾನಂದ ಪೀಚೆಮನೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯೆ ಸಂಗೀತ ರವಿರಾಜ್, ಪೆರಾಜೆ ಚಿಗುರು ಯುವಕ ಮಂಡಲದ ಅಧ್ಯಕ್ಷ ರಮೇಶ ಮಜಿಕೋಡಿ, ಇತರರು ಪಾಲ್ಗೊಳ್ಳಲಿದ್ದಾರೆ.