ಸಿದ್ದಾಪುರ, ಡಿ. ೨೩ : ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ವಿಜಯನಗರ ಸಮೀಪದಲ್ಲಿ ಕಾಡಾನೆಗಳು ಕಾಫಿ ತೋಟದಲ್ಲಿ ಬೀಡು ಬಿಟ್ಟು ದಾಂದಲೆ ನಡೆಸಿ ಕೃಷಿ ಫಸಲುಗಳನ್ನು ನಾಶಗೊಳಿಸಿದ ಹಿನ್ನೆಲೆಯಲ್ಲಿ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಂ ನೇತೃತ್ವದಲ್ಲಿ ಮಂಗಳವಾರದAದು ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮರಿಯಾನೆ ಸೇರಿದಂತೆ ಮೂರು ಕಾಡಾನೆಗಳು ಕಂಡುಬAದವು ಎಂದು ಉಪವಲಯ ಅರಣ್ಯ ಅಧಿಕಾರಿ ರಾಘವ ತಿಳಿಸಿದ್ದಾರೆ. ಬೆಳಗ್ಗಿನಿಂದ ಸಂಜೆವರೆಗೆ ಕಾರ್ಯಾಚರಣೆ ನಡೆಸಿ ಈ ಮೂರು ಕಾಡಾನೆಗಳನ್ನು ಚೋಕಂಡಳ್ಳಿ ಭಾಗದ ಕಾಡಿಗೆ ಅಟ್ಟಲಾಯಿತು. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆರ್. ಆರ್.ಟಿ. ತಂಡ ಮತ್ತು ಆನೆ ಕಾರ್ಯಪಡೆ ತಂಡದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಇAದು ಕಾರ್ಯಾಚರಣೆ

ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಬಿಳುಗುಂದ. ಕಾವಾಡಿ ಕುಂಬೇರಿ. ಕೊಳತೋಡು-ಬೈಗೋಡು, ಹೊಸಕೋಟೆ. ಹೊಸೂರು ಬೆಟ್ಟಗೇರಿ. ಚಂಬೆಬೆಳ್ಳೂರು.ಕಣ್ಣAಗಾಲ. ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂದಲೆ ನಡೆಸುತ್ತಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ತಾ. ೨೪ ರಂದು (ಇಂದು) ನಡೆಯಲಿದ್ದು ಈ ಭಾಗದ ಕಾಫಿ ತೋಟದ ಮಾಲೀಕರು ಹಾಗೂ ಕಾರ್ಮಿಕರು, ಸಾರ್ವಜನಿಕರು, ಶಾಲೆ-ಕಾಲೇಜುಗಳಿಗೆ ತೆರಳುವ ಮಕ್ಕಳು ವಾಹನ ಚಾಲಕರು ಎಚ್ಚರಿಕೆ ವಹಿಸುವಂತೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಕಾರ್ಯಾಚರಣೆ ಸಂದರ್ಭದಲ್ಲಿ ಸಹಕರಿಸುವಂತೆ ವಿರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಮ್ ಮನವಿ ಮಾಡಿದ್ದಾರೆ.