ಮಡಿಕೇರಿ, ಡಿ. ೨೪: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ ರ ಪ್ರಕರಣ ೩೧೦ ರನ್ವಯ ಹಾಗೂ ಸರ್ಕಾರದ ಆದೇಶ ಸಂಖ್ಯೆ:ಗ್ರಾಅಪAರಾ:೧೪೮:ಜಿಪಸ:೨೦೨೧. ದಿನಾಂಕ: ೧೫-೧೨-೨೦೨೫. ರ ರೀತ್ಯಾ ಹಾಗೂ ಕರ್ನಾಟಕ ಪಂಚಾಯತ್ ರಾಜ್ ಜಿಲ್ಲಾ ಯೋಜನಾ ಸಮಿತಿಯ ಸದಸ್ಯರ ಚುನಾವಣೆ (ತಿದ್ದುಪಡಿ) ನಿಯಮಗಳು ೨೦೧೬ ರ ಅನುಸಾರವಾಗಿ ಪ್ರದತ್ತವಾಗಿರುವ ಅಧಿಕಾರದ ಮೇರೆಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಕೊಡಗು ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿAದ ಚುನಾಯಿತ ಸದಸ್ಯರ ಪೈಕಿ ೮ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲು ಚುನಾವಣಾ ವೇಳಾಪಟ್ಟಿ ಪಟ್ಟಿ ಪ್ರಕಟಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ನಾಮನಿರ್ದೆಶನ ಪತ್ರವನ್ನು ನಿಗದಿತ ನಮೂನೆ-೧ ರಲ್ಲಿ ಚುನಾವಣಾಧಿಕಾರಿಗಳಾದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಕೆಳಕಂಡ ಚುನಾವಣಾ ವೇಳಾಪಟ್ಟಿಯಂತೆ ಸಲ್ಲಿಸಬಹುದಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಗಳಿಗೆ ಸಹಕರಿಸಲು ಸಹಾಯಕ ಚುನಾವಣಾಧಿಕಾರಿಯಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಡಗು ಜಿಲ್ಲೆ ಅವರನ್ನು ನೇಮಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಪೈಕಿ ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ಮೂಲಕ ಆಯ್ಕೆ ಮಾಡಬೇಕಾದ ಸದಸ್ಯರ ಸಂಖ್ಯೆ ೮, ಜನವರಿ ೨ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೩ ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಸುವುದು.
ಜನವರಿ ೨ ರಂದು ಅಪರಾಹ್ನ ೪ ಗಂಟೆಯಿAದ ೫.೩೦ ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆದುಕೊಳ್ಳಲು ಜನವರಿ ೩ ರಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಜನವರಿ ೪ ರಂದು ಬೆಳಿಗ್ಗೆ ೧೧ ಗಂಟೆಯಿAದ ೧.೩೦ ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಮತದಾನ ನಡೆಯಲಿದೆ.
ಜನವರಿ ೪ ರಂದು ಮಧ್ಯಾಹ್ನ ೩ ಗಂಟೆಯಿAದ ೫ ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ. ನಂತರ ಫಲಿತಾಂಶ ಘೋಷಣೆಯಾಗಲಿದೆ. (ಸೂಚನೆ: ಸಮಾನ ಮತಗಳು ಬಂದಲ್ಲಿ ಲಾಟರಿ ಮೂಲಕ ಆಯ್ಕೆ) ಜನವರಿ ೪ ರಂದು ಮಧ್ಯಾಹ್ನ ೩ ಗಂಟೆಯಿAದ ೫ ಗಂಟೆವರೆಗೆ. ಜನವರಿ ೪ ರಂದು ಚುನಾವಣೆ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಕೊಡಗು ಜಿಲ್ಲಾ ಯೋಜನಾ ಸಮಿತಿ ಚುನಾವಣಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.