ಗೋಣಿಕೊಪ್ಪಲು, ಡಿ. ೨೭: ಪೊನ್ನಂಪೇಟೆ ಕ್ರೀಡಾ ವಸತಿ ನಿಲಯದಲ್ಲಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ, ಗುಣಮಟ್ಟದ ಆಹಾರ ವಿತರಿಸುತ್ತಿಲ್ಲ ಎಂಬ ಆರೋಪದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ಪೊನ್ನಂಪೇಟೆ ಕ್ರೀಡಾ ವಸತಿ ಶಾಲೆಯ ಆವರಣದಲ್ಲಿ ಆಹಾರ ಗುತ್ತಿಗೆದಾರರು, ಪೋಷಕರು, ಇಲಾಖೆಯ ಹಿರಿಯ ಅಧಿಕಾರಿಗಳು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಸಮ್ಮುಖದಲ್ಲಿ ಸಭೆ ನಡೆಸಿದ ಅರುಣ್‌ಮಾಚಯ್ಯ ನಿಲಯಕ್ಕೆ ತಾತ್ಕಾಲಿಕವಾಗಿ ಪೋಷಕರನ್ನೊಳಗೊಂಡ ಮೇಲುಸ್ತುವಾರಿ ಸಮಿತಿಯನ್ನು ಅಧಿಕಾರಿಗಳ ಸಮ್ಮುಖದಲ್ಲಿ ರಚನೆ ಮಾಡುವ ಮೂಲಕ ತಾತ್ಕಾಲಿಕ ಪರಿಹಾರÀ ನೀಡಿದರು.

ನಿಲಯದ ವಿದ್ಯಾರ್ಥಿಗಳಿಗೆ ಆಹಾರ ವಿತರಣೆಯಲ್ಲಿ ಲೋಪವಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಕ್ರೀಡಾ ವಸತಿ ಶಾಲೆಯ ಮುಂಭಾಗದಲ್ಲಿ ಪ್ರತಿಭಟಿಸಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಈ ವಿಚಾರ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆಯೆ ಮಧ್ಯಪ್ರವೇಶಿಸಿದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಸಮಸ್ಯೆ ಪರಿಹಾರಕ್ಕೆ ಹಲವು ನಿರ್ಧಾರಗಳನ್ನು ಸಭೆಯಲ್ಲಿ ಮಂಡಿಸಿದರು. ಅರುಣ್ ಮಾಚಯ್ಯ ಅವರು ನೀಡಿದ ಸಲಹೆಗೆ ವಿದ್ಯಾರ್ಥಿಗಳ ಪೋಷಕರು ಸಮ್ಮತಿ ವ್ಯಕ್ತಪಡಿಸುವ ಮೂಲಕ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಲಭಿಸಿತು.

ಸಭೆಯಲ್ಲಿ ಮಾತನಾಡಿದ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ಚಕ್ರವರ್ತಿ ಕಳೆದ ಒಂದು ವರ್ಷಗಳ ಹಿಂದೆ ಕ್ರೀಡಾ ವಸತಿ ನಿಲಯದಲ್ಲಿ ಆಹಾರ ವಿತರಿಸುವ ಗುತ್ತಿಗೆಯನ್ನು ಹೆಚ್. ಚಿತ್ರ ಎಂಬವರು ಪಡೆದಿದ್ದು ಅವರ ಗುತ್ತಿಗೆ ಅವಧಿ ಇತ್ತೀಚೆಗೆ ಮುಕ್ತಾಯಗೊಂಡಿದೆ.

ಮುAದಿನ ಗುತ್ತಿಗೆದಾರರು ನೇಮಕವಾಗುವವರೆಗೂ ಇವರನ್ನೇ ಮುಂದುವರೆಸಲಾಗುತ್ತಿದೆ. ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಗಮನ ಹರಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಇಲಾಖೆಯೊಂದಿಗೆ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಸಹಕರಿಸಬೇಕು. ಈಗಾಗಲೇ ಗುತ್ತಿಗೆ ವಿಚಾರದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭಗೊAಡಿದ್ದು ಮುಂದಿನ ಒಂದು ತಿಂಗಳ ಅವಧಿಯಲ್ಲಿ ನೂತನ ಗುತ್ತಿಗೆದಾರರನ್ನು ನೇಮಕಗೊಳಿಸಲಾಗುವುದು ಎಂದರು.

ಪೋಷಕರ ಅಹವಾಲನ್ನು ಆಲಿಸಿದ ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ಪೋಷಕರ ಅಭಿಪ್ರಾಯವನ್ನು ಆದÀರಿಸಿ ಆದಷ್ಟು ಬೇಗನೆ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಗುತ್ತಿಗೆದಾರರನ್ನು ಬದಲಾವಣೆ ಮಾಡುತ್ತೇನೆ. ಒಂದು ತಿಂಗಳ ಅವಧಿಯಲ್ಲಿ ಸಮಸ್ಯೆಗೆ ಪರಿಹಾರ ಲಭಿಸಲಿದೆ.

ಪೊನ್ನಂಪೇಟೆ ಕ್ರೀಡಾ ವಸತಿ ಶಾಲೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇಲ್ಲಿನ ಸಣ್ಣ ಪುಟ್ಟ ನ್ಯೂನತೆಗಳನ್ನು ಸರಿಪಡಿಸಲು ಸಂಬAಧಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷರಿಗೆ ಸೂಚನೆ ನೀಡಲಾಗುವುದು. ಕ್ರೀಡಾ ವಸತಿ ಶಾಲೆಯು ಉತ್ತಮವಾಗಿ ನಡೆಯುತ್ತಿರುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದ್ದು, ಸಮರ್ಪಕ ಆಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ವಸತಿ ನಿಲಯದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಮಾಡಲಾಗಿದೆ. ಆಗಿಂದಾಗ್ಗೆ ತಾನೂ ಕೂಡ ಆಗಮಿಸಿ ಇಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸುತ್ತೇನೆ. ಒಟ್ಟಾಗಿ ನಿಲಯದ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಆಹಾರ ಗುತ್ತಿಗೆದಾರರು ತಮ್ಮ ಅಭಿಪ್ರಾಯವನ್ನು ಮುಂದಿಟ್ಟರು. ಹಲವು ಪೋಷಕರು ಈ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದರು. ಸಭೆಯಲ್ಲಿ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಆಲಿರ ರಶೀದ್, ಸದಸ್ಯರಾದ ಕೋಳೇರ ಭಾರತಿ, ಬೊಟ್ಟಂಗಡ ದಶಮಿ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಶಾಜಿ ಅಚ್ಚುತ್ತನ್, ಪ್ರಮುಖ ಚೆಪ್ಪುಡಿರ ಬೋಪಣ್ಣ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.