ಸೋಮವಾರಪೇಟೆ, ಡಿ. ೨೭: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸೋಮವಾರಪೇಟೆ ತಾಲೂಕು ಘಟಕ ಹಾಗೂ ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ ಸಂಯುಕ್ತ ಆಶ್ರಯದಲ್ಲಿ ತಾ. ೨೯ ರಂದು ರಾಷ್ಟçಕವಿ ಕುವೆಂಪು ಅವರ ಜನ್ಮ ದಿನಾಚರಣೆ ಸಮಾರಂಭ ಮಧ್ಯಾಹ್ನ ೩.೪೫ಕ್ಕೆ ಪಟ್ಟಣದ ಸಾಹಿತ್ಯ ಭವನದಲ್ಲಿ ನಡೆಯಲಿದೆ.
ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಎಸ್.ಡಿ. ವಿಜೇತ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ, ಇನ್ಸ್ಪೆಕ್ಟರ್ ಮುದ್ದುಮಾದೇವ, ಆರ್‌ಎಫ್‌ಒ ಶೈಲೇಂದ್ರಕುಮಾರ್, ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ ಅಧ್ಯಕ್ಷ ಜೆ.ಸಿ. ಶೇಖರ್ ಉಪಸ್ಥಿತರಿರುವರು ಎಂದು ಗೌರವ ಕಾರ್ಯದರ್ಶಿ ಎ.ಪಿ. ವೀರರಾಜು ತಿಳಿಸಿದ್ದಾರೆ.