ಸೋಮವಾರಪೇಟೆ, ಡಿ. ೨೮: ರಾಜ್ಯ ಸರ್ಕಾರ ದ್ವೇಷ ಭಾಷಣ ವಿಧೇಯಕ ಅಂಗೀಕರಿಸುವ ಮೂಲಕ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ಮಂಡಲ ಭಾರತೀಯ ಜನತಾ ಪಾರ್ಟಿ ಹಾಗೂ ಬಿಜೆಪಿ ಯುವ ಮೋರ್ಚಾದಿಂದ ತಾ. ೨೯ ರಂದು (ಇಂದು) ಪಟ್ಟಣದಲ್ಲಿ ಪ್ರತಿಭಟನೆ ನಡೆಯಲಿದೆ. ಪೂರ್ವಾಹ್ನ ೧೦ಕ್ಕೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಪುಟ್ಟಪ್ಪ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮನುಕುಮಾರ್ ರೈ ತಿಳಿಸಿದ್ದಾರೆ.
ತಾ. ೨೯ ರಂದು (ಇಂದು) ಸೋಮವಾರಪೇಟೆ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸೋಮವಾರಪೇಟೆ ಬಿಜೆಪಿಯ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಸೋಮವಾರಪೇಟೆ ಪಟ್ಟಣದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಖಂಡಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.