ಪೊನ್ನಂಪೇಟೆ, ಡಿ. ೨೮: ವಿದ್ಯಾರ್ಥಿ ದಿಸೆಯಲ್ಲಿ ಸಮಯ ವ್ಯರ್ಥ ಮಾಡದೆ ಶ್ರಮಪಟ್ಟರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶ್ರದ್ಧೆ ಹಾಗೂ ಶ್ರಮಪಟ್ಟು ಓದುವ ಮೂಲಕ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾವೇರಿ ಕಾಲೇಜು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮತ್ತೋರ್ವ ಅತಿಥಿ ಕೇಂದ್ರ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಟಿ.ಜಿ. ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಬೇಕು ಎಂದರು.
ಪ್ರಾAಶುಪಾಲ ಎಸ್.ಎಸ್. ಮಾದಯ್ಯ ಅವರು ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ, ಕೊಡಗು ಸಹಕಾರ ರತ್ನ ಪ್ರಶಸ್ತಿ ವಿಜೇತ ಚಿರಿಯಪಂಡ ಕೆ. ಉತ್ತಪ್ಪ, ೨೦೨೫ ರ ರಾಷ್ಟಿçÃಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ, ಮಣಿಪಾಲ್ ಎಂಐಟಿ ಕಾಲೇಜಿನ ಗಣಿತಶಾಸ್ತç ಪ್ರಾಧ್ಯಾಪಕಿ ಹಾಗೂ ಕಾವೇರಿ ಕಾಲೇಜು ಹಳೇ ವಿದ್ಯಾರ್ಥಿ ಡಾ. ಶೋಭಾ. ಎಂ.ಇ. ಅವರನ್ನು ಸನ್ಮಾನಿಸಲಾಯಿತು. ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೆಪAಡ ಸುಗುಣ ಮುತ್ತಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕಾವೇರಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕ ಡಾ. ಲೆಫ್ಟಿನೆಂಟ್ ಎಂ.ಆರ್. ಅಕ್ರಮ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಜಂಟಿ ನಿರ್ದೇಶಕರಾದ ಸಿ. ಎ. ಯತೀನ್ ಬೋಪಯ್ಯ, ಜನನಿ. ಹೆಚ್.ಎನ್., ಕ್ರೀಡಾ ಕಾರ್ಯದರ್ಶಿ ಪಂಚಮಿ ಬಿ.ಬಿ., ಸಾಂಸ್ಕೃತಿಕ ಕಾರ್ಯದರ್ಶಿ ಚಿರಾಗ್ ಚಿಣ್ಣಪ್ಪ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು, ಪೋಷಕರು ಇದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.