ಮಡಿಕೇರಿ, ಡಿ. ೨೯: ಕರ್ನಾಟಕ ಶಾಸ್ತಿçÃಯ ಸಂಗೀತದ ಸೀನಿಯರ್ ವಿಭಾಗದಲ್ಲಿ ತಾಪಂಡ ಹರ್ಷಿತ್ ಪೊನ್ನಪ್ಪ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ತೋರಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಡಿಕೇರಿಯಲ್ಲಿ ನಡೆಸಿದ ಕಲಾ ಪ್ರತಿಭೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಮೈಸೂರಿನಲ್ಲಿ ನಡೆದ ವಿಭಾಗ ಮಟ್ಟದಲ್ಲಿಯೂ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

೨೦೨೫ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ವತಿಯಿಂದ ನಡೆಸಲಾದ ಕರ್ನಾಟಕ ಶಾಸ್ತಿçÃಯ ಸಂಗೀತದ ಸೀನಿಯರ್ ವಿಭಾಗದಲ್ಲಿ ಕೊಡಗಿನಿಂದ ಪರೀಕ್ಷೆ ಬರೆದಿದ್ದ ಏಕೈಕ ವಿದ್ಯಾರ್ಥಿ ತಾಪಂಡ ಹರ್ಷಿತ್ ಪೊನ್ನಪ್ಪ ಉತ್ತಮ ಅಂಕದೊAದಿಗೆ ತೇರ್ಗಡೆಯಾಗಿದ್ದಾರೆ.

ಇವರು ಮಡಿಕೇರಿಯ ದೇಚೂರು ನಿವಾಸಿ ತಾಪಂಡ ಲೋಕೇಶ್ ಮತ್ತು ಶುಭಾ ದಂಪತಿಯ ಪುತ್ರ. ನಗರದ ಸಂಗೀತ ಶಿಕ್ಷಕಿ ಸರೋಜಾ ಸುಧಾಕರ್ ಬಳಿ ಸಂಗೀತಾಭ್ಯಾಸ ಮಾಡುತ್ತಿದ್ದು, ಮಡಿಕೇರಿಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ.