ಮಡಿಕೇರಿ, ಡಿ. ೨೯: ನಗರದ ಶ್ರೀ ಪ್ರಸನ್ನ ಗಣಪತಿ ದೇವಾಲಯದ ವಾರ್ಷಿಕೋತ್ಸವ ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನಡೆಯಿತು.
ಇಂದು ಬೆಳಿಗ್ಗೆ ಗಣಪತಿ ಹೋಮ, ಕಲಾಹೋಮ, ಕಲಶ ಪೂಜೆ, ಕಲಶಾಭಿಷೇಕ, ಸುದರ್ಶನ ಹೋಮ, ಮಹಾಪೂಜೆ ಹಾಗೂ ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ದೇವಾಲಯದ ೨೫ನೇ ವಾರ್ಷಿಕೋತ್ಸವದ ಪ್ರಯುಕ್ತ ಗಣಪತಿಗೆ ಸ್ವರ್ಣ ಕಿರೀಟಧಾರಣೆ ನೆರವೇರಿತು.