ಸುಂಟಿಕೊಪ್ಪ, ಡಿ. ೨೯: ಕೊಡಗು ಜಿಲ್ಲೆಯಿಂದ ಪುಟ್ಬಾಲ್ ತೀರ್ಪುಗಾರರಾಗಿ ಆಯ್ಕೆಯಾದ ಧೀರಜ್ ರೈ ಶ್ರೀನಿವಾಸ್ ಅವರನ್ನು ಆಮ್ಮತ್ತಿಯಲ್ಲಿರುವ ಜಿಲ್ಲಾ ಪುಟ್ಬಾಲ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಪುಟ್ಬಾಲ್ ಅಸೋಸಿಯೇಷನ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕಾರ್ಯದರ್ಶಿ ಪಿ.ಎ. ನಾಗೇಶ್, ಉಪಾಧ್ಯಕ್ಷ ಕ್ರಿಸ್ಟೋಫರ್ ಮಡಿಕೇರಿ, ಖಜಾಂಚಿ ದೀಪು ಮಾಚಯ್ಯ, ಸಮಿತಿ ಸದಸ್ಯರಾದ ಲಿಜೇಶ್ ಅಮ್ಮತ್ತಿ ತೀರ್ಪುಗಾರರಾದ ದರ್ಶನ್ ಸುಕುಮಾರ್ ಮತ್ತು ಅಶ್ವಥ್ ಇದ್ದರು.