ಕುಶಾಲನಗರ, ಡಿ. ೩೦: ವೈಕುಂಠ ಏಕಾದಶಿ ಅಂಗವಾಗಿ ಕುಶಾಲನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಅರ್ಚಕರಾದ ಗಿರೀಶ್ ಭಟ್, ಯೋಗೇಶ್ ಭಟ್ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು. ಭಕ್ತಾದಿಗಳು ಭಕ್ತಿಭಾವದೊಂದಿಗೆ ವೈಕುಂಠ ದ್ವಾರ ಮೂಲಕ ಸಾಗಿ ಬಂದು ಪ್ರಸಾದ ಸ್ವೀಕರಿಸಿದರು.

ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ದೇವಾಲಯಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಆರ್ಯವೈಶ್ಯ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಿ ಭಾವದಿಂದ ಪೂಜೆಯಲ್ಲಿ ತೊಡಗಿಸಿಕೊಂಡರು.

ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಮಂಡಳಿ ಪದಾಧಿಕಾರಿಗಳು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಮಂಜುನಾಥ ಗುಂಡುರಾವ್ ಮತ್ತಿತರರು ಇದ್ದರು.