ಮಡಿಕೇರಿ, ಡಿ. ೩೦: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು, ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ ಮಡಿಕೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ ೧ ರಂದು (ನಾಳೆ) ಸೌಹಾರ್ದ ಸಹಕಾರಿ ದಿನಾಚರಣೆ ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿದೆ.
ಕೊಡವ ಸಮಾಜ ಕಚೇರಿ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಚೆರುಮಂದAಡ ಜಿ. ಪೊನ್ನಪ್ಪ ಸಹಕಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕೊಡವ ಸಮಾಜದ ಉಪಾಧ್ಯಕ್ಷ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಕಾರ್ಯಾಧ್ಯಕ್ಷ ಕೇಕಡ ಎ. ದೇವಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕೊಡವ ಸಮಾಜದ ನಿರ್ದೇಶಕಿ ಕನ್ನಂಡ ಕವಿತಾ ಬೊಳ್ಳಪ್ಪ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.