ಕೂಡಿಗೆ, ಡಿ. ೩೦: ಕೂಡಿಗೆ ಮೊರಾರ್ಜಿ ವಸತಿ ಶಾಲೆ ಮತ್ತು ಅಂಬೇಡ್ಕರ್ ವಸತಿ ಶಾಲಾ ಮಕ್ಕಳಿಗೆ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮೊರಾರ್ಜಿ ದೇಸಾಯಿ ಶಾಲೆಯ ಸಭಾಂಗಣದಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆಯ ಎ.ಎಸ್.ಐ. ಎನ್. ಕುಮಾರಿ ಅವರು ಬಾಲ್ಯ ವಿವಾಹ, ಪೋಕ್ಸೊ ಕಾಯ್ದೆ, ಸೈಬರ್ ಅಪರಾಧಗಳು ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆ, ಸಂಚಾರಿ ಅಪರಾಧಗಳು ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿದರು.
ಈ ಸಂದರ್ಭ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಭಾರತಿ, ಪೊಲೀಸ್ ಸಿಬ್ಬಂದಿಗಳಾದ ನೇಬೂಬು, ರಮೇಶ್, ಶಾಲಾ ಶಿಕ್ಷಕರಾದ ದಿನೇಶ್, ದೊಡ್ಡಯ್ಯ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಇದ್ದರು.