ಸಿದ್ದಾಪುರ, ಡಿ. ೩೦: ಸಿದ್ದಾಪುರದ ಪಟ್ಟಣದ ಮೈಸೂರು ರಸ್ತೆಯಲ್ಲಿ ಮನೆಗೆ ನುಗ್ಗಿದ ಕಳ್ಳರು ಭಾರೀ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಮಾಸುವ ಮುನ್ನವೇ ಇದೀಗ ಕಣ್ಣಂಗಾಲ ಗ್ರಾಮದ ಅಮ್ಮತ್ತಿ ಒಂಟಿಯAಗಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.

ಅಮ್ಮತ್ತಿ - ಒಂಟಿಯAಗಡಿ ನಿವಾಸಿ ಸುಬ್ರಮಣಿ ಅವರು ತಾ. ೨೯ ರಂದು ಬೆಳಿಗ್ಗೆ ತಮ್ಮ ಪತ್ನಿಗೆ ಚಿಕಿತ್ಸೆಗೆಂದು ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಮೈಸೂರಿಗೆ ತೆರಳಿದ್ದರು. ಸಂಜೆ ಮನೆಗೆ ಹಿಂತಿರುಗಿ ಬಂದು ನೋಡಿದಾಗ ಮನೆಯ ಹಿಂಭಾಗದ ಮೂಲಕ ಕಳ್ಳರು ನುಗ್ಗಿ ಮಲಗುವ ಕೋಣೆಯಲ್ಲಿದ್ದ ಬೀರುವಿನ ಬೀಗ ಮುರಿದು ರೂ. ೫ ಲಕ್ಷ ಮೌಲ್ಯದ ೯೪ ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಸುಬ್ರಮಣಿ ವೀರಾಜಪೇಟೆ ತಾಲೂಕು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ವಿವಿಧೆಡೆಗಳಲ್ಲಿ ಚಿನ್ನಾಭರಣಗಳು, ಕಾಫಿ ಕಳ್ಳತನಗಳು ನಡೆಯುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.