ಮಡಿಕೇರಿ, ಡಿ. ೩೦: ಹೊಸ ವರ್ಷಾಚರಣೆ ಸಂದರ್ಭ ಹೊಟೇಲ್, ರೆಸಾರ್ಟ್, ಲಾಡ್ಜ್, ಹೋಂಸ್ಟೇಗಳಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆದರೆ ಅವುಗಳ ಮಾಲೀಕರುಗಳನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೊಡಗು ಜಿಲ್ಲೆಗೆ ಹೊಸ ವರ್ಷಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹೋಂಸ್ಟೇ, ರೆಸಾರ್ಟ್, ಲಾಡ್ಜ್, ಹೊಟೇಲ್ಗಳಲ್ಲಿ ವಾಸ್ತವ್ಯ ಹೂಡುತ್ತಾರೆ. ಹೊಸ ವರ್ಷಾಚರಣೆ ಮಾಡುತ್ತಾರೆ. ಈ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಂಬAಧಿಸಿದವರು ಎಚ್ಚರವಹಿಸಬೇಕು. ರಾತ್ರಿ ೧೦ ಗಂಟೆಯವರಗೆ ನಿಗದಿತ ಡೆಸಿಬಲ್ನಲ್ಲಿ ಧ್ವನಿವರ್ಧಕದ ಬಳಕೆಗೆ ಅವಕಾಶವಿದೆ. ರಾತ್ರಿ ೧೦ ಗಂಟೆಯ ಬಳಿಕ ಒಳಾಂಗಣದಲ್ಲಿ ಧ್ವನಿವರ್ಧಕ ಬಳಸಬಹುದು ಹೊರತು ಹೊರಾಂಗಣದಲ್ಲಿ ಬಳಸುವಂತಿಲ್ಲ. ಅನುಮತಿ ಇಲ್ಲದೆ ಮದ್ಯ ಸರಬರಾಜು ಮಾಡುವಂತಿಲ್ಲ. ಈಗಾಗಲೇ ಜಿಲ್ಲೆಯ ಹಲವು ಕಡೆ ಹೋಂಸ್ಟೇ, ರೆಸಾರ್ಟ್, ಲಾಡ್ಜ್, ಹೊಟೇಲ್ ಮಾಲೀಕರ ಸಭೆ ನಡೆಸಿ ಕಾನೂನು ನಿಯಮಗಳ ಬಗ್ಗೆ ಮಾಹಿತಿ ನೀಡಲಾಗಿದ್ದು, ಅವುಗಳನ್ನು ಪಾಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಮರಾಜನ್ ಹೇಳಿದರು.
ಹೊಸ ವರ್ಷಾಚರಣೆ ಸಂದರ್ಭ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳಾದರೂ ೧೧೨ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಯಾವುದಾದರೂ ಲಾಡ್ಜ್, ಹೋಂಸ್ಟೇ, ರೆಸಾರ್ಟ್, ಹೊಟೇಲ್ಗಳಲ್ಲಿ ಅಕ್ರಮ ಚಟುವಟಿಕೆಗಳು, ಹೆಣ್ಣುಮಕ್ಕಳಿಗೆ ತೊಂದರೆ ನೀಡುವುದು, ಮಾದಕ ವಸ್ತುಗಳ ಬಳಕೆ, ಇತ್ಯಾದಿಗಳು ಕಂಡು ಬಂದರೆ ಸಾರ್ವಜನಿಕರು ೦೮೨೭೨-೨೨೮೩೦೦, ೯೪೮೦೮೦೪೯೦೦ ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಅಲ್ಲದೆ ಪೊಲೀಸರು ತಾ. ೩೧ ರ ರಾತ್ರಿ ಹೋಂಸ್ಟೇ, ರೆಸಾರ್ಟ್, ಲಾಡ್ಜ್, ಹೊಟೇಲ್ಗಳ ಮೇಲೆ ನಿಗಾ ವಹಿಸಲಿದ್ದು, ಅಕ್ರಮಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತರೆ ಅಥವಾ ಸಂಶಯ ಬಂದರೆ ದಾಳಿ ನಡೆಸಿ ಕಾನೂನು ಉಲ್ಲಂಘನೆ ಆಗಿದ್ದರೆ ಕ್ರಮಕೈಗೊಳ್ಳುತ್ತಾರೆ ಎಂದು ಎಸ್ಪಿ ಮಾಹಿತಿಯಿತ್ತರು.
ಯಾವುದೇ ಕಾರಣಕ್ಕು ಮಾದಕ ವಸ್ತುಗಳ ಬಳಕೆ, ರೇವ್ ಪಾರ್ಟಿಗಳಿಗೆ ಅವಕಾಶವಿರುವುದಿಲ್ಲ. ರೇವ್ ಪಾರ್ಟಿಗಳನ್ನು ಮಾಡಲು ಮುಂದಾಗಿರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ನಾವು ಮುಂದಾಗಿದ್ದೇವೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ರಾಜಾಸೀಟ್, ಬಸ್ನಿಲ್ದಾಣ, ಅಬ್ಬಿಫಾಲ್ಸ್ ಜಂಕ್ಷನ್ ಸೇರಿದಂತೆ ಹಲವೆಡೆ ಪೊಲೀಸರ ವಿಶೇಷ ತಂಡವನ್ನು ನಿಯೋಜಿಸಲಾಗುವುದು. ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು ಅಥವಾ ಬಳಕೆ ಮಾಡುವುದು ಕಂಡುಬAದಲ್ಲಿ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳ ಮಾಲೀಕರು ಹಾಗೂ ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಒಂದು ವೇಳೆ ಮಾಹಿತಿ ನೀಡದೇ ಮಾದಕ ವಸ್ತುಗಳನ್ನು ಮಾರಾಟ, ಬಳಕೆ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಮಾಡಲು ಸಹಕರಿಸಿರುವುದು ಕಂಡುಬAದಲ್ಲಿ ಮಾಲೀಕರು ಹಾಗೂ ಮಧ್ಯವರ್ತಿಗಳ ವಿರುದ್ಧ ಕಲಂ: ೨೫ ಎನ್ಡಿಪಿಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಪರವಾನಗಿ ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹೇಳಿದರು.
ತಾ. ೩೧ ಹಾಗೂ ಜ. ೧ ರಂದು ಹಗಲು ಮತ್ತು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಚರ್ಚ್ಗಳಲ್ಲಿ ಪ್ರಾರ್ಥನೆ ನಡೆಯುವ ಸಂದರ್ಭ ಅಗತ್ಯ ಸಿಬ್ಬಂದಿಯನ್ನು ನೇಮಿಸಲಾಗುವುದು. ಎಲ್ಲಾ ಕ್ಲಬ್, ಲಾಡ್ಜ್, ರೆಸಾರ್ಟ್, ಹೋಂಸ್ಟೇಗಳನ್ನು ಪರಿಶೀಲನೆ ನಡೆಸಿ ಸಮರ್ಪಕ ರಿಜಿಸ್ಟರ್ ನಿರ್ವಹಿಸುವ ಕುರಿತು ಹಾಗೂ ರಿಜಿಸ್ಟರ್ ನಿರ್ವಹಿಸದೇ ಇದ್ದಲ್ಲಿ ಕಡ್ಡಾಯವಾಗಿ ನಿರ್ವಹಣೆ ಮಾಡುವಂತೆ ಸೂಕ್ತ ತಿಳುವಳಿಕೆ ನೀಡಲಾಗಿದೆ. ಅಲ್ಲದೆ ಆ ಸ್ಥಳಗಳಲ್ಲಿ ಅಳವಡಿಸಿರುವ ಸಿಸಿ ಟಿವಿಗಳು ಸುಸ್ಥಿತಿಯಲ್ಲಿರುವ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ. ಕ್ಲಬ್, ಲಾಡ್ಜ್, ರೆಸಾರ್ಟ್, ಹೋಂಸ್ಟೇಗಳಿಗೆ ಆಗಮಿಸುವ ಪ್ರವಾಸಿಗರ ಪೂರ್ಣ ಮಾಹಿತಿಯನ್ನು ರಿಜಿಸ್ಟರ್ನಲ್ಲಿ ನಮೂದಿಸುವಂತೆ ಹಾಗೂ ಭಾವಚಿತ್ರವಿರುವ ಯಾವುದಾದರೊಂದು ಮಾನ್ಯತೆ ಪಡೆದ ದಾಖಲಾತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಕ್ಲಬ್, ಲಾಡ್ಜ್, ರೆಸಾರ್ಟ್, ಹೋಂಸ್ಟೇಗಳಲ್ಲಿ ನಡೆಸುವ ಮನೋರಂಜನಾ ಕಾರ್ಯಕ್ರಮಗಳನ್ನು ನಿಗದಿತ ಸಮಯದೊಳಗೆ ಮುಕ್ತಾಯಗೊಳಿಸಬೇಕು. ಯಾವುದೇ ಕಾರ್ಯಕ್ರಮವನ್ನು ಆಯೋಜಿಸುವ ಮುನ್ನ ಸಂಬAಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆದುಕೊಳ್ಳಬೇಕು. ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಹಾಗೂ ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಸಿಡಿ ಮದ್ದುಗಳನ್ನು ಸಿಡಿಸಬಾರದು. ಅರಣ್ಯ ಪ್ರದೇಶ, ನದಿ ತೀರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಸಮಾರಂಭಗಳನ್ನು, ಡಿ.ಜೆ ಬಳಸುವುದನ್ನು ಅಥವಾ ಕಾರ್ಯಕ್ರಮ ಆಯೋಜಿಸುವುದನ್ನು ನಿಷೇಧಿಸಲಾಗಿದೆ ಎಂದು ಎಸ್ಪಿ ರಾಮರಾಜನ್ ಮಾಹಿತಿಯಿತ್ತರು.