ಮಡಿಕೇರಿ, ಜ. ೧: ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣವನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ವಿಶೇಷ ಮಧ್ಯಸ್ಥಗಾರಿಕಾ ಅಭಿಯಾನ ೨.೦ ತಾ. ೨ ರಿಂದ ೯೦ ದಿನಗಳ ಕಾಲ ನಡೆಯಲಿದೆ.

ಜಿಲ್ಲೆಯ ನ್ಯಾಯಾಲದಯಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು. ಕಕ್ಷಿದಾರರು ಈ ೯೦ ದಿನಗಳ ವಿಶೇ಼ಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು, ಪ್ರಬಾರ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.