ಸೋಮವಾರಪೇಟೆ: ಮಡಿಕೇರಿ ತಾಲೂಕಿನ ಪೆರಾಜೆ ಜ್ಯೋತಿ ವಿದ್ಯಾಸಂಸ್ಥೆ, ಜ್ಯೋತಿ ಪ್ರೌಢಶಾಲೆ, ಪೂರ್ವ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಹಿರಿಯ ವಿದ್ಯಾರ್ಥಿ ಸಂಘ, ಇವರುಗಳ ಆಶ್ರಯದಲ್ಲಿ ಬೆಂಗಳೂರಿನ ಪ್ರಣವ್ ಫೌಂಡೇಷನ್ ಸಹಯೋಗದೊಂದಿಗೆ ಶಾಲಾ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಸಂಭ್ರಮದಿAದ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರು ಬಿ.ಎಂ.ಆರ್.ಸಿ.ಎಲ್.ನ ನಿರ್ದೇಶಕ ಸುಬ್ರಮಣ್ಯ ಗುಡ್ಗೆ ಅವರು, ಗ್ರಾಮೀಣ ಭಾಗದ ಮಕ್ಕಳಿಗೂ ಸಹ ಉತ್ತಮ ವಿದ್ಯಾಭ್ಯಾಸ ಸಿಗಬೇಕು. ಈ ನಿಟ್ಟಿನಲ್ಲಿ ಸಂಘ-ಸAಸ್ಥೆಗಳು ಸಹಕಾರ ನೀಡಬೇಕು. ಪ್ರಣವ್ ಫೌಂಡೇಷನ್ ಈ ಶಾಲೆಗೆ ಸಹಯೋಗ ನೀಡಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಣವ್ ಫೌಂಡೇಷನ್‌ನ ಅಧ್ಯಕ್ಷ ರಾಕೇಶ್ ರೈ ವಹಿಸಿದ್ದರು. ವೇದಿಕೆಯಲ್ಲಿ ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಚಂದ್ರಕಲಾ ಬಳ್ಳಡ್ಕ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಶಾಸ್ತಾವು ದೇವಾಲಯದ ಮುಖ್ಯಸ್ಥ ಎನ್.ಎ. ಜಿತೇಂದ್ರ, ಜ್ಯೋತಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಎನ್. ನೇತ್ರಾವತಿ, ನಿರ್ದೇಶಕ ಡಾ. ಎನ್.ಎ. ಜ್ಞಾನೇಶ್, ಶಕುಂತಲಾ ಯು. ರೈ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಉದಯಚಂದ್ರ ಕುಂಬಳಚೇರಿ, ವಿದ್ಯಾರ್ಥಿ ಸಂಘದ ನಾಯಕಿ ಹಿತಶ್ರೀ, ಶಿಕ್ಷಕಿ ಶ್ರೀಲತಾ, ವಿದ್ಯಾಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಬಿ. ಹೆಬ್ಬಾಳ್, ಸಂಚಾಲಕ ಮಹೇಶ್ ರೈ ಮೇನಾಳ, ಪ್ರಣವ್ ಫೌಂಡೇಷನ್‌ನ ಉಪಾಧ್ಯಕ್ಷ ಕೆ.ಪಿ. ರಕ್ಷಿತ್, ನಿರ್ದೇಶಕ ಪ್ರೇಮ್ ಸಾಗರ್, ವಿದ್ಯಾಸಂಸ್ಥೆಯ ನಿರ್ದೇಶಕ ಮಹೇಶ್ ಕುಮಾರ್, ಎನ್.ಎ. ರಾಮಚಂದ್ರ ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭ ಪ್ರಣವ್ ಫೌಂಡೇಷನ್ ವತಿಯಿಂದ ಒದಗಿಸಲಾದ ಶಾಲಾ ವಾಹನಕ್ಕೆ ಜ್ಯೋತಿ ವಿದ್ಯಾಸಂಸ್ಥೆಯ ನಿರ್ದೇಶಕ ಎನ್.ಎ. ರಾಮಚಂದ್ರ ಚಾಲನೆ ನೀಡಿದರು. ಇದರೊಂದಿಗೆ ಪ್ರಣವ್ ಫೌಂಡೇಷನ್ ಹಾಗೂ ಬೆಂಗಳೂರಿನ ಎಂ.ಆರ್. ಕನ್‌ಸ್ಟ್ರಕ್ಷನ್ ವತಿಯಿಂದ ನಿರ್ಮಿಸಿರುವ ನೂತನ ವಸತಿ ನಿಲಯ ಪಂಚವಟಿಯನ್ನು ಬಿ.ಎಂ.ಆರ್.ಸಿ.ಎಲ್.ನ ಮುಖ್ಯ ಇಂಜಿನಿಯರ್ ರಾಘವೇಂದ್ರ ಶಾನುಭೋಗ್ ಉದ್ಘಾಟಿಸಿದರು.

ಮುಖ್ಯಶಿಕ್ಷಕ ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲೆಯ ವಾರ್ಷಿಕ ವರದಿ ವಾಚಿಸಿದರು.ವೀರಾಜಪೇಟೆ: ಶಾಲೆಗಳು ಜ್ಞಾನ ಪಸರಿಸುವ ದೇವಾಲಯಗಳು. ಕಲಿಕೆಗಾಗಿ ಬರುವ ವಿದ್ಯಾರ್ಥಿಗಳು ಭಕ್ತರಂತೆ, ಜ್ಞಾನ ಭಂಡಾರವಾದ ಶಾಲೆಗಳಲ್ಲಿ ಜ್ಞಾನ ಸಂಪಾದನೆಗಾಗಿ ಹಲವಾರು ಪುಸ್ತಕಗಳಿವೆ. ಆದರೆ ಪುಸ್ತಕಗಳು ಖರೀದಿಯ ವಸ್ತುಗಳಾಗಬಾರದು. ಬದಲಿಗೆ ಜ್ಞಾನ ಸಂಪಾದನೆಯ ಕೇಂದ್ರಗಳಾಗಬೇಕು ಎಂದು ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಹೇಳಿದರು.

ವೀರಾಜಪೇಟೆಯ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ೨೪ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಫಲ ಸಿಗುತ್ತದೆ. ಕ್ರೀಡೆ, ಸಂಸ್ಕೃತಿ, ಕಲಿಕೆಗಳನ್ನು ಆಸಕ್ತಿಯೊಂದಿಗೆ ಆಯ್ಕೆಮಾಡಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.

ಆಶೀರ್ವಾದ್ ಖಾಸಗಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಗೌರವ್ ಅಯ್ಯಪ್ಪ ಮಾತನಾಡಿ, ಮಿತ ಆಹಾರ ಸೇವನೆ, ಮನೆಯೂಟ, ಶಾರೀರಿಕ ವ್ಯಾಯಾಮದಿಂದ ಆರೋಗ್ಯಯುಕ್ತ ಸಮಾಜ ನಿರ್ಮಾಣ ಸಾಧ್ಯ ಮಕ್ಕಳಿಗೆ ಕಲಿಕೆಯೊಂದಿಗೆ ಆಹಾರದ ಉಪಯೋಗ ಕುರಿತು ಹೇಳಿಕೊಡುವ ಪ್ರವೃತ್ತಿ ಪೊಷಕರಲ್ಲಿ ಜಾಗೃತವಾಗಬೇಕು. ವಾತಾವರಣಕ್ಕೆ ಅನುಗುಣವಾಗಿ ಮಕ್ಕಳ ಪಾಲನೆ ಪೋಷಣೆಗೆ ಒತ್ತು ನೀಡುವಂತಾಗಬೇಕು ಎಂದು ಹೇಳಿದರು.

ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಥಾಪಕ ಮಾದಂಡ ಪೂವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಗತಿ ಆಂಗ್ಲ ಮಾಧ್ಯಮ ಶಾಲೆ ೩೦ ವರ್ಷಗಳ ಇತಿಹಾಸವಿದ್ದು, ಬೆರಳಣಿಕೆಯಷ್ಟು ವಿದ್ಯಾರ್ಥಿಗಳು ಆರಂಭದಲ್ಲಿ ವಿದ್ಯಾರ್ಜನೆ ಪಡೆದುಕೊಂಡರು. ಇದೀಗ ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಹೊಂದಿರುವ ಶಾಲೆಯು ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ತನ್ನ ಛಾಪುಮೂಡಿಸಿದೆ ಎಂದರು.

ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಮಾದಂಡ ತಿಮ್ಮಯ್ಯ, ಸುಶ್ಮ ತಿಮ್ಮಯ್ಯ ಉಪಸ್ಥಿತರಿದ್ದರು. ೨೦೨೫-೨೬ನೇ ಸಾಲಿನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕಣಿವೆ: ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆವರಣದಲ್ಲಿ ಆಂಗ್ಲಭಾಷಾ ಬೋಧಕ ಶಿಕ್ಷಕರ ತರಬೇತಿ ಕಾರ್ಯಾಗಾರದ ಸಮಾರೋಪದಲ್ಲಿ ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸು, ಉಪನ್ಯಾಸಕ ಸ್ವಾಮಿ, ಹೇಮಂತಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶಿವಕುಮಾರ್ ಪಾಲ್ಗೊಂಡಿದ್ದರು.ಕಣಿವೆ: ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆವರಣದಲ್ಲಿ ಆಂಗ್ಲಭಾಷಾ ಬೋಧಕ ಶಿಕ್ಷಕರ ತರಬೇತಿ ಕಾರ್ಯಾಗಾರದ ಸಮಾರೋಪದಲ್ಲಿ ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸು, ಉಪನ್ಯಾಸಕ ಸ್ವಾಮಿ, ಹೇಮಂತಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶಿವಕುಮಾರ್ ಪಾಲ್ಗೊಂಡಿದ್ದರು.ಹೆಬ್ಬಾಲೆ: ಕೂಡಿಗೆ ಕೃಷಿ ಫಾರಂ ಆವರಣದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ ಸಮಾರೋಪ ಹಾಗೂ ಕಾಲೇಜು ವಾರ್ಷಿಕೋತ್ಸವ ನಡೆಯಿತು.

ಕೂಡಿಗೆ ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಎಂಬ ವಿಷಯವಾರು ಕೀಳರಿಮೆ ಹಾಗೂ ವ್ಯತ್ಯಾಸವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು. ಎಲ್ಲಾ ವಿಭಾಗಗಳು ಮುಖ್ಯವಾಗಿವೆ. ಚೆನ್ನಾಗಿ ಓದಿ ಉತ್ತಮ ಅಂಕಗಳಿಸಿದಲ್ಲಿ ನಿರ್ದಿಷ್ಟ ಗುರಿಮುಟ್ಟಲು ಸಾಧ್ಯವಿದೆ ಎಂದರು.

ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎ. ಯೋಗೇಶ್ ಮಾತನಾಡಿ, ವಿದ್ಯಾರ್ಥಿ ನಿರಂತರ ಅಧ್ಯಯನಶೀಲತೆ ಮೈಗೂಡಿಸಿಕೊಂಡು ಕಠಿಣ ಪರಿಶ್ರಮದೊಂದಿಗೆ ಓದಿದಾಗ ಭವಿಷ್ಯ ಉಜ್ವಲವಾಗುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಹಂಡ್ರAಗಿ ನಾಗರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥಮಾಡಬಾರದು. ಮೊಬೈಲ್ ಮತ್ತು ಟಿವಿಗಳಿಂದ ದೂರ ಉಳಿದು ಓದಿನ ಕಡೆಗೆ ಆಸಕ್ತಿ ತೋರಬೇಕು ಎಂದರು.

ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಹೆಚ್.ಕೆ. ಸೋಮಶೇಖರ್, ನಿರ್ದೇಶಕ ಈರಪ್ಪ ಬಹುಮಾನ ವಿತರಣೆ ಮಾಡಿದರು.

ಉಪನ್ಯಾಸಕ ಸತೀಶ್ ಕಾಲೇಜು ವರದಿ ವಾಚನ ಮಾಡಿದರು. ಇದೇ ಸಂದರ್ಭ ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಯೋಗೇಶ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭ ಉಪನ್ಯಾಸಕರಾದ ನಾಗಪ್ಪ ಯಾಲಕ್ಕಿಕಟ್ಟೆ, ಕಾವೇರಮ್ಮ, ಹನುಮರಾಜು, ರಮೇಶ್ ಮತ್ತಿತರರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ಫಾತಿಮತ್ ಸನಾ, ಲಯನ ಸ್ವಾಗತಿಸಿದರು, ಲಾವಣ್ಯ ವಂದಿಸಿದರು.

ವಿದ್ಯಾರ್ಥಿಗಳಿAದ ಭರತನಾಟ್ಯ, ಜಾನಪದ ನೃತ್ಯ, ಸಮೂಹ ನೃತ್ಯ, ಹಾಡುಗಾರಿಕೆ ನಡೆಯಿತು.ವೀರಾಜಪೇಟೆ: ವೀರಾಜಪೇಟೆ ತಾಲೂಕಿನ ಪೊನ್ನಂಪೇಟೆ ವಲಯದ ಅರುವತೋಕ್ಲು ಕಾರ್ಯ ಕ್ಷೇತ್ರದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಕಲಿಕಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಶಾಲೆಯ ಪ್ರಬಾರ ಮುಖ್ಯೋಪಾಧ್ಯಾಯಿನಿ ರೇವತಿ ಜ್ಯೊತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ವಲಯದ ಮೇಲ್ವಿಚಾರಕ ನಾಗರಾಜ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಶಿಷ್ಯವೇತನ, ಶಾಲೆಗಳಿಗೆ ಸಲಕರಣೆ ನೀಡುವುದರ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಸಹಶಿಕ್ಷಕರಾದ ಚಂದನ, ವಿದ್ಯಾ, ಸುಮಿ, ಯಡ್ಲಿಸ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಉಷಾರಾಣಿ ಹಾಗೂ ಸೇವಾ ಪ್ರತಿನಿಧಿ ಗೌರಿ, ಭವಾನಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಡಂಗ: ಎಸ್‌ಎಂಎಸ್ ವಿದ್ಯಾಸಂಸ್ಥೆಯ ಪೂರ್ವ ವಿದ್ಯಾರ್ಥಿ ರಾಜ ಸೂರಜ್ ಬರೆದ ಕಾಕೋಟುಪರಂಬು ಎಂಬ ಪೌರಾಣಿಕ ಭೂಮಿಯ ಪೌರಾಣಿಕ ಕಥೆ ಕಾಕೋಟಚ್ಚ ಎಂಬ ಪುಸ್ತಕವನ್ನು ಎಸ್‌ಎಂಎಸ್ ವಿದ್ಯಾಸಂಸ್ಥೆಯಲ್ಲಿ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಳಚೇರಿ ಮಠದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ವಿರೂಪಾಕ್ಷಯ್ಯ, ಸಂಸ್ಥೆಯ ಪ್ರಾಂಶುಪಾಲೆ ಕುಸುಮ್ ಟಿಟೋ ಅವರ ಸಮ್ಮುಖದಲ್ಲಿ ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು.ಮಡಿಕೇರಿ: ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್ (ಎಐಟಿಯುಸಿ) ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಗುಣಶೇಖರ್ ಅವರ ಸ್ಮರಣಾರ್ಥ ಕಾರ್ಮಿಕ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಸಕಲೇಶಪುರದಲ್ಲಿ ನಡೆಯಿತು.

ಪ್ರತಿಭಾ ಪುರಸ್ಕಾರ ಪಡೆದ ಬಿಳಿಗೇರಿ ಗ್ರಾಮದ ಪಿಯುಸಿ ಮತ್ತು ೧೦ನೇ ತರಗತಿ ವಿದ್ಯಾರ್ಥಿಗಳನ್ನು ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್‌ನ ಕೊಡಗು ಜಿಲ್ಲಾ ಘಟಕ ಸನ್ಮಾನಿಸಿ ಪ್ರೋತ್ಸಾಹಿಸಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ. ಸೋಮಪ್ಪ ಅವರು ಕಾರ್ಮಿಕರ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಮತ್ತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎನ್ನುವ ಕಾರಣಕ್ಕಾಗಿ ಪ್ರತಿವರ್ಷ ಗುಣಶೇಖರ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.

ಪ್ರಸ್ತುತ ವರ್ಷ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಪಿಯುಸಿ ಮತ್ತು ೧೦ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಕಾರ್ಮಿಕ ಕುಟುಂಬದ ವಿದ್ಯಾರ್ಥಿಗಳನ್ನು ಸಕಲೇಶಪುರದಲ್ಲಿ ಪುರಸ್ಕರಿಸಲಾಗಿದೆ. ಬಿಳಿಗೇರಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಪುರಸ್ಕಾರಕ್ಕೆ ಆಯ್ಕೆಯಾಗಿದ್ದರು ಎಂದರು.

ಸನ್ಮಾನ ಕಾರ್ಯಕ್ರಮದಲ್ಲಿ ಎಐಟಿಯುಸಿ ಸಂಘಟನೆಯ ಪ್ರಮುಖರಾದ ಬಿಳಿಗೇರಿ ಲೋಕೇಶ್, ಗೋಪಾಲ, ಸಂಜೀವ, ರಾಘವೇಂದ್ರ, ಗಣೇಶ, ಪ್ರೇಮ ಮತ್ತಿತರರು ಉಪಸ್ಥಿತರಿದ್ದರು.ವೀರಾಜಪೇಟೆ: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಲೆಯಲ್ಲಿ ನಡೆಯುವ ಸಾಂಸ್ಕöÈತಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಅಮ್ಮತ್ತಿಯ ಮಾಚಿಮಂಡ ದೇವಯ್ಯ ಮೆಮೋರಿಯಲ್ ಪಬ್ಲಿಕ್ ಸ್ಕೂಲ್‌ನ ವ್ಯವಸ್ಥಾಪಕರು ಹಾಗೂ ಪ್ರಾಂಶುಪಾಲೆ ಇಂದು ಗಣಪತಿ ಅಭಿಪ್ರಾಯಪಟ್ಟರು.

ಅಮ್ಮತ್ತಿ ಪಟ್ಟಣದ ಮಾಚಿಮಂಡ ದೇವಯ್ಯ ಮೆಮೋರಿಯಲ್ ಪಬ್ಲಿಕ್ ಸ್ಕೂಲ್‌ನ ಸಭಾಂಗಣದಲ್ಲಿ ನಡೆದ ಮೆಗಾ ಕಾರ್ನಿಪೋಪ್ಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ಯುಗಕ್ಕೆ ಮಾರುಹೋಗುತ್ತಿರುವ ಯುವಜನತೆಗೆ ಐತಿಹಾಸಿಕ ವಿಚಾರವನ್ನು ತಿಳಿ ಹೇಳುವ ಅಗತ್ಯ ಇದೆ. ಪಠ್ಯದಲ್ಲಿ ಸಾಮಾಜಿಕವಾದ ಎಲ್ಲಾ ವಿಚಾರಗಳನ್ನು ಏಕಕಾಲದಲ್ಲಿ ಹೇಳಲು ಸಾಧ್ಯವಿಲ್ಲ. ಆದರೆ ಕಲೆಗಳ ಮೂಲಕ ತಿಳಿಸಲು ಸಾಧ್ಯವಿದೆ ಎಂದರು.

ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಪೋಷಕರಿಗೆ ಬೆಂಕಿರಹಿತ ಅಡುಗೆ ಸ್ಪರ್ಧೆ ಹಾಗೂ ಪ್ಲವರ್ ಮೇಕಿಂಗ್ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದೇ ಸಂದರ್ಭ ವಿವಿಧ ಕ್ರೀಡೆ, ಚಿತ್ರಕಲಾ ಸ್ಪರ್ಧೆ ಮತ್ತು ಸಾಂಸ್ಕöÈತಿಕ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರಾಗಿ ರೂಪೇಶ್, ಅಡುಗೆ ಸ್ಪರ್ಧೆಯ ತೀರ್ಪುಗಾರರಾಗಿ ಅಮ್ಮತ್ತಿಯ ಜ್ಯೋತಿ ಕಾರ್ಯ ನಿರ್ವಹಿಸಿದರು.

ವೇದಿಕೆಯಲ್ಲಿ ವೀರಾಜಪೇಟೆಯ ಟೀಮ್ ಇಂಟೋಪೀಸ್ ನೃತ್ಯ ತಂಡದ ವಿಷ್ಣು ಅವರ ಕೊರಿಯೊಗ್ರಾಫ್‌ನಲ್ಲಿ ನೃತ್ಯ ವೈಭವ ಹಾಗೂ ಜಾದೂಗಾರ ರಾಜೇಶ್ ಅವರಿಂದ ವಿವಿಧ ಮ್ಯಾಜಿಕ್ ಪ್ರದರ್ಶನ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯವರು, ಶಿಕ್ಷಕರುಗಳಾದ ಜಾನ್ಸಿ ತಿಮ್ಮಯ್ಯ, ವಿಮಲ ಮಂದಪ್ಪ, ಕೀರ್ತನ, ನಿಶಾ, ಸುಷ್ಮಾ, ಸೌಫತ್, ದೀಪಿಕಾ, ಕಾವ್ಯ ಸೇರಿದಂತೆ ಶಾಲಾ ಸಿಬ್ಬಂದಿಗಳು, ಪೋಷಕರು, ವಿದ್ಯಾರ್ಥಿಗಳು ಇದ್ದರು.ಸುಳ್ಯ: ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರವರ ೯೭ನೇ ಹುಟ್ಟುಹಬ್ಬದ ಅಂಗವಾಗಿ ಸಂಸ್ಥಾಪಕರ ದಿನಾಚರಣೆಯನ್ನು ಕೆ.ವಿ.ಜಿ. ಇಂಜಿನಿಯ ರಿಂಗ್ ಕಾಲೇಜಿನಲ್ಲಿ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ‘ಬಿ’ ಅಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರು ದೀಪ ಬೆಳಗಿಸಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ೨೦೨೬-೨೭ನೇ ಸಾಲಿನ ಬಿ.ಇ. ಪ್ರಥಮ ವರ್ಷ (ಇಂಜಿನಿಯರಿAಗ್) ಬಿ.ಇ. ಲ್ಯಾಟರಲ್ ಎಂಟ್ರಿ (ಇಂಜಿನಿಯರಿAಗ್) ಎಂ.ಟೆಕ್ ಹಾಗೂ ಎಂ.ಬಿ.ಎ. ಕೋರ್ಸ್ಗಳ ದಾಖಲಾತಿಗೆ (ಮುಂಗಡ ಸೀಟು ಕಾಯ್ದಿರಿಸಲು) ಅಧಿಕೃತವಾಗಿ ಚಾಲನೆ ನೀಡಲಾಯಿತು.

೨೦೨೬-೨೭ರ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕೆ.ವಿ.ಜಿ. ಇಂಜಿನಿಯರಿAಗ್ ಕಾಲೇಜಿನ ಪ್ರಥಮ ವರ್ಷಕ್ಕೆ ಸೇರ್ಪಡೆಯಾಗುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ವಿದ್ಯಾರ್ಥಿ ವೇತನ ನೀಡಲಾಗುವುದು. ಇದಕ್ಕಾಗಿ ಕೆ.ವಿ.ಜಿ. ಸ್ಕಾಲರ್‌ಶಿಪ್ ಪರೀಕ್ಷೆಯನ್ನು ಆಯೋಜಿಸಲಾಗುತ್ತದೆ.

ಜೊತೆಗೆ ಕಾಲೇಜಿನ ವತಿಯಿಂದ ಸಿ.ಇ.ಟಿ. ಮಾದರಿಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್, ನಿರ್ದೇಶಕ ಡಾ. ಅಭಿಜ್ಞ ಕೆ.ಆರ್. ಮೌರ್ಯ ಆರ್. ಕುರುಂಜಿ, ಎಕ್ಸಿಕ್ಯುಟಿವ್ ಡೈರೆಕ್ಟರ್, ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯ, ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ., ಉಪ-ಪ್ರಾಂಶುಪಾಲ ಡಾ. ಶ್ರೀಧರ್ ಕೆ., ದಿನೇಶ್ ಮಡ್ತಿಲ, ಪ್ರಾಂಶುಪಾಲರು, ಕೆವಿಜಿಐಟಿಐ, ಭವಾನಿಶಂಕರ ಅಡ್ತಲೆ, ಆಡಳಿತಾಧಿಕಾರಿ, ಎ.ಒ.ಎಲ್.ಇ., ಕಮಿಟಿ‘ಬಿ’, ಮಾಧವ ಬಿ.ಟಿ., ಆಡಳಿತಾಧಿಕಾರಿ, ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಪ್ರಸನ್ನಕುಮಾರ್ ಕಲ್ಲಾಜೆ, ಆಡಳಿತಾಧಿಕಾರಿ, ಎ.ಒ.ಎಲ್.ಇ, ಕಮಿಟಿ ‘ಬಿ’, ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಡೀನ್ ಅಡ್ಮಿಶನ್ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿAಗ್ ವಿಭಾಗ ಮುಖ್ಯಸ್ಥ ಡಾ. ಬಾಲಪ್ರದೀಪ್ ಕೆ.ಎನ್., ಸಿವಿಲ್ ಇಂಜಿನಿಯರಿAಗ್ ವಿಭಾಗ ಮುಖ್ಯಸ್ಥ ಡಾ. ಚಂದ್ರಶೇಖರ್ ಎ., ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿAಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ವಿಭಾಗ ಮುಖ್ಯಸ್ಥರು, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿAಗ್ ವಿಭಾಗ/ಡೀನ್-ರೀಸರ್ಚ್, ಡಾ. ಸವಿತಾ ಸಿ.ಕೆ., ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗ ಮುಖ್ಯಸ್ಥ ಪ್ರೊ. ರಾಘವೇಂದ್ರ ಬಿ. ಕಾಮತ್, ಎಂ.ಬಿ.ಎ ವಿಭಾಗ ಮುಖ್ಯಸ್ಥ ಪ್ರೊ. ಕೃಷ್ಣಾನಂದ ಎ., ಫಿಸಿಕ್ಸ್ ವಿಭಾಗ ಮುಖ್ಯಸ್ಥ ಹಾಗೂ ಡೀನ್-ಎಕ್ಸಾಮಿನೇಶನ್ ಡಾ. ಪ್ರವೀಣ್ ಎಸ್.ಡಿ., ಕೆಮಿಸ್ಟಿç ವಿಭಾಗ ಮುಖ್ಯಸ್ಥೆ ಡಾ. ಸುರೇಖಾ ಎಂ., ಡೀನ್ ಅಕಾಡೆಮಿಕ್ ಡಾ. ಪ್ರಜ್ಞಾ ಎಂ.ಆರ್., ಡೀನ್ ಹಾಸ್ಟೆಲ್ ಡಾ. ಭಾಗ್ಯ ಹೆಚ್.ಕೆ, ಡೀನ್ ಸ್ಟುಡೆಂಟ್ ಅಫೇರ್ಸ್ ಡಾ. ಭಾಗ್ಯಜ್ಯೋತಿ ಕೆ.ಎ., ವಿದ್ಯಾರ್ಥಿ ಕ್ಷೇಮಾಧಿಕಾರಿ, ಪ್ರೊ. ಲೋಕೇಶ್ ಪಿ.ಸಿ., ಸಿವಿಲ್ ಇಂಜಿನಿಯರಿAಗ್ ವಿಭಾಗ ಪ್ರೊ. ಅರುಣ್ ಕುಮಾರ್ ಹೆಚ್. ಟ್ರೆöÊನಿಂಗ್ ಮತ್ತು ಪ್ಲೇಸ್‌ಮೆಂಟ್ ಆಫೀಸರ್, ಪ್ರೊ. ಪ್ರಶಾಂತ್ ಕಕ್ಕಾಜೆ, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.