ಪೊನ್ನಂಪೇಟೆ, ಜ. ೧: ಕೊಡಗಿನ ಜಮ್ಮಾ ಬಾಣೆ ಭೂಮಿ ವಿವಾದಗಳ ಪರಿಹಾರಕ್ಕಾಗಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಶಾಸನ ಸಭೆಯಲ್ಲಿ ಅಂಗೀಕಾರಗೊAಡ ಕರ್ನಾಟಕ ಭೂಕಂದಾಯ ೨ನೇ ತಿದ್ದುಪಡಿ ವಿಧೇಯಕ-೨೦೨೫ ಬೇರೆ ಬೇರೆ ಕಾನೂನುಗಳ ನೆಪಗಳಿಂದ ಮುಂದೆAದೂ ಜನರಿಗೆ ಅಡ್ಡಿಯಾಗದಿರಲಿ. ಈ ನಿಟ್ಟಿನಲ್ಲಿ ತಿದ್ದುಪಡಿ ಕಾನೂನು ಅನುಷ್ಠಾನಗೊಳಿಸುವ ಸಂದರ್ಭದಲ್ಲೇ ಕಂದಾಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿ ಈ ತಿದ್ದುಪಡಿ ಮಸೂದೆ ಕೊಡಗಿನ ಜನರ ಭಾವನೆಗೆ ಪೂರಕವಾಗಿ ಶಾಶ್ವತವಾಗಿರಿಸಲು ವಿಶೇಷ ಆಸಕ್ತಿ ವಹಿಸಬೇಕು ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ, ಕ್ಷೇತ್ರದ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ಬಳಿ ಮನವಿ ಮಾಡಿದರು.

ವೀರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಕೆಎಂಎ ಆಡಳಿತ ಮಂಡಳಿ ಪದಾಧಿಕಾರಿಗಳ ನಿಯೋಗ, ಕೊಡಗಿನ ಜಮ್ಮಾ ಹಿಡುವಳಿದಾರರನ್ನು ದಶಕಗಳಿಂದ ಕಾಡುತ್ತಿದ್ದ ಜಿಲ್ಲೆಯ ಜಮ್ಮಾ ಬಾಣೆ ಭೂಮಿಗೆ ಸಂಬAಧಿಸಿದ ಕರ್ನಾಟಕ ಕಂದಾಯ ಕಾನೂನು ೧೯೬೪ರ ತಿದ್ದುಪಡಿ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೊನ್ನಣ್ಣ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಸನ್ಮಾನಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೊಡವ ಮುಸ್ಲಿಂ ಅಸೋಸಿಯೇಷನ್‌ನ ಕೋಶಾಧಿಕಾರಿ ಹರಿಶ್ಚಂದ್ರ ಎ. ಹಂಸ, ಸಂಘಟನಾ ಕಾರ್ಯದರ್ಶಿ ಮೀತಲ್ತಂಡ ಇಸ್ಮಾಯಿಲ್, ಹಿರಿಯ ನಿರ್ದೇಶಕ ಚಿಮ್ಮಿಚೀರ ಇಬ್ರಾಹಿಂ ಹಾಜಿ, ನಿರ್ದೇಶಕರಾದ ಮಂಡೇAಡ ಎ. ಮೊಯ್ದು, ಕೋಳುಮಂಡ ರಫೀಕ್, ಕತ್ತಣಿರ ಅಂದಾಯಿ, ಕುಂಡAಡ ರಜ್ಹಾಕ್, ಪರವಂಡ ಎ. ಸಿರಾಜ್ ಹಾಗೂ ಕೆಎಂಎ ಸದಸ್ಯರೂ ಆಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಟ್ಟಿಯಡ ಎ. ಹನೀಫ್ ಇದ್ದರು.