ಕೂಡಿಗೆ, ಜ. ೧ : ಕೂಡಿಗೆಯಲ್ಲಿರುವ ಶ್ರೀ ಶಕ್ತಿ ವೃದ್ಧಾಶ್ರಮದ ವಯೋವೃದ್ಧರಿಗೆ ಹೆಚ್. ಶಿವರಾಮೇಗೌಡ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಘಟಕ ಹಾಗೂ ನಗರ ಘಟಕದ ವತಿಯಿಂದ ರಾಷ್ಟçಕವಿ ಕುವೆಂಪುರವರ ೧೨೦ನೇ ಜನ್ಮ ದಿನಾಚರಣೆಯ ಅಂಗವಾಗಿ ಸಮವಸ್ತç ವಿತರಣೆ ಮಾಡಲಾಯಿತು.
ಹೆಚ್. ಶಿವರಾಮೇಗೌಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಬಿ.ಎ. ದಿನೇಶ್ ಶೆಟ್ಟಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸೀರೆ ಹಾಗೂ ಪುರುಷರಿಗೆ ಶರ್ಟ್ ಹಾಗೂ ಪಂಚೆ ವಿತರಿಸಲಾಯಿತು. ನಂತರ ಎಲ್ಲಾ ವಯೋವೃದ್ಧರಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.
ಈ ಸಂದರ್ಭ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಬಿ.ಎ. ದಿನೇಶ್ ಶೆಟ್ಟಿ, ನಗರ ಅಧ್ಯಕ್ಷ ಮಣಿಕಂಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು, ಜಿಲ್ಲಾ ಗೌರವ ಅಧ್ಯಕ್ಷ ರಾಜಶೇಖರ ಗೌಡ, ಜಿಲ್ಲಾ ಉಪಾಧ್ಯಕ್ಷರಾದ ನಿರ್ಮಲ, ಸರಳ ರಾಮಣ್ಣ, ತಾಲೂಕು ಸಂಘಟನಾ ಕಾರ್ಯದರ್ಶಿ ಅನುಸೂಯ, ಮಡಿಕೇರಿ ತಾಲೂಕು ಅಧ್ಯಕ್ಷ ಶಿವಣ್ಣ, ಕುಶಾಲನಗರ ತಾಲೂಕು ಅಧ್ಯಕ್ಷ ಪ್ರವೀಣ್, ಪರಮೇಶ್, ಧನಪಾಲ್, ರಂಗಸ್ವಾಮಿ, ಸತೀಶ್, ಅರುಣ್, ಮಡಿಕೇರಿ ನಾಗರಾಜ್, ರಮೇಶ್ ರೈ, ಕೆ. ಕೃಷ್ಣ, ಜಿಲ್ಲಾ ಕಾರ್ಯದರ್ಶಿ ಜಯರಾಜ್, ಶಕ್ತಿ ವೃದ್ಧಾಶ್ರಮದ ವ್ಯವಸ್ಥಾಪಕ ಚಂದ್ರು ಸೇರಿದಂತೆ ಪದಾಧಿಕಾರಿಗಳು ಇದ್ದರು.