ಐಗೂರು, ಜ. ೨: ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಐಗೂರು ಪದವಿಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಕಾಜೂರು ಶಾಲೆಯಲ್ಲಿ ವಿಶ್ವಮಾನವ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ನಂತರ ಶಿಕ್ಷಕ ಸತೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಜ್ಞಾನಪೀಠ ಪ್ರಶಸ್ತಿ ಪಡೆದವರಲ್ಲಿ ಮೊದಲಿಗರಾದ ಕುವೆಂಪು ಅವರು ಕವನ, ನಾಟಕ, ಕಾದಂಬರಿಗಳನ್ನು ರಚಿಸಿದ್ದಾರೆ. ಇವರ ಕೃತಿಗಳಾದ ನೆನಪಿನ ದೋಣಿ, ಮಲೆಗಳಲ್ಲಿ ಮದುಮಗಳು ಮತ್ತು ಸ್ವಾಮಿ ವಿವೇಕಾನಂದರ ಕೃತಿಗಳು ಮನಮುಟ್ಟು ವಂತಿದೆ ಎಂದರು. ಪ್ರಾಥಮಿಕ ಶಾಲೆ, ಪ್ರೌಢಶಾಲೆ ವಿದ್ಯಾರ್ಥಿ ಗಳಿಗೆ ಮತ್ತು ಅಧ್ಯಾಪಕ ವೃಂದದವರಿಗೆ ಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಗೀತ ಗಾಯನ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾಜೂರು ಶಾಲೆ ಮುಖ್ಯ ಶಿಕ್ಷಕಿ ಸರಳ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಅನಸೂಯ ನಿರೂಪಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಉಮೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್, ಕಾಜೂರು ಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಅಧ್ಯಾಪಕ ವೃಂದದವರು ಭಾಗವಹಿಸಿದ್ದರು.