ಮಡಿಕೇರಿ, ಜ. ೨: ಮೈಸೂರು ಕಾಫಿ ಸಂಸ್ಕರಣ ಸಂಘದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿತು. ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘಕ್ಕೆ ೩ ಎಕರೆ ೩೪ ಗುಂಟೆ ಜಮೀನು ಹಾಗೂ ೩ ಕೋಟಿ ಅನುದಾನ ನೀಡುವಂತೆ ಸಂಘದ ಅಧ್ಯಕ್ಷರು ಹಾಗೂ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪ್ರಭುಕುಮಾರ್ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.