ಮಡಿಕೇರಿ, ಜ. ೨: ಕೊಡಗು ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡ ಎಸ್‌ಜೆ. ಸೋಮ ಶೇಖರ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಪ್ರಬಾರ ಜಿಲ್ಲಾಧಿ ಕಾರಿಯಾಗಿದ್ದ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರಿಂದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಡಿಎಫ್‌ಓ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಉಪವಿಭಾಗಾ ಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್‌ಗಳಾದ ಪ್ರವೀಣ್ ಕುಮಾರ್, ಶ್ರೀಧರ್, ಕಿರಣ್ ಗೌರಯ್ಯ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಈ ಹಿಂದೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಆಯುಕ್ತರಾಗಿ, ಚಿತ್ರದುರ್ಗ ಜಿಲ್ಲೆಯಲ್ಲಿ ಜಿ.ಪಂ.ಸಿಇಒ ಆಗಿ ಕರ್ತವ್ಯ ನಿರ್ವಹಿಸಿದ್ದರು.