ಕೂಡಿಗೆ, ಜ. ೨: ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣಾ ಕಾರ್ಯಕ್ರಮ ವಿಶ್ವಕರ್ಮ ಸಮಾಜದ ಕಚೇರಿಯಲ್ಲಿ ನಡೆಸಲಾಯಿತು.

ಕರ್ನಾಟಕ ಸರ್ಕಾರ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ವೀರಣ್ಣ ಅರ್ಕಸಾಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕರ್ನಾಟಕದ ಶಿಲ್ಪಿಗಳು ದೇಶದಾದ್ಯಂತ ನಮ್ಮ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ವಿಶ್ವಕರ್ಮ ಸಮಾಜದವರು ಅತ್ಯಂತ ಪ್ರಮುಖ ಪಾತ್ರವನ್ನು ನಿರ್ವಹಿಸಿರುತ್ತಾರೆ. ಇಂದು ಆ ಶಿಲ್ಪಿಗಳನ್ನು ಗುರುತಿಸುವಲ್ಲಿ ಸರ್ಕಾರವು ಕೂಡ ಮುಖ್ಯ ಪಾತ್ರವನ್ನು ವಹಿಸಿದ್ದು ಅವರ ನೆನಪಿಗಾಗಿ ಅಮರಶಿಲ್ಪಿ ಜಕಣಾಚಾರ್ಯ ಅವರ ಸಂಸ್ಮರಣ ದಿನಾಚರಣೆಯನ್ನು ಆಚರಿಸುವಲ್ಲಿ ಕರ್ನಾಟಕ ಸರ್ಕಾರ ಪ್ರಮುಖ ಪಾತ್ರ ವಹಿಸಿದೆ ಎಂದು ಅಭಿಪ್ರಾಯಪಟ್ಟರು.

ವಿಶ್ವಕರ್ಮ ಸಮಾಜದ ಅಧ್ಯಕ್ಷ ಹೆಚ್.ಬಿ. ಲಿಂಗಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ವಿ. ಕುಮಾರ್, ಉಪಾಧ್ಯಕ್ಷ ದುರ್ಗೇಶ್, ಕಾರ್ಯದರ್ಶಿ ಹೆಚ್.ಬಿ. ರಾಜಮೂರ್ತಿ, ಹಿರಿಯರಾದ ನಾಗಾಚಾರಿ ಹೆಚ್.ಎನ್. ಮತ್ತು ವಿಶ್ವಕರ್ಮ ಮಹಿಳಾ ಘಟಕದ ಅಧ್ಯಕ್ಷೆ ಲಲಿತ ವರದರಾಜ್ ಹಾಗೂ ಮಹಿಳಾ ಸದಸ್ಯರು, ಸಮಾಜದ ಅನೇಕ ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ವೀರಣ್ಣ ಅರ್ಕಸಾಲಿ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.