ಮುಳ್ಳೂರು, ಜ. ೨: ಸಮೀಪದ ಬ್ಯಾಡಗೊಟ್ಟ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಸಿಎಂಸಿಎ ಸಂಸ್ಥೆ ಬೆಂಗಳೂರು ಮತ್ತು ನಾವು ಪ್ರತಿಷ್ಠಾನಾ ಸಂಸ್ಥೆ ಕೊಡಗು ಹಾಗೂ ಬ್ಯಾಡಗೊಟ್ಟ ಗ್ರಾ.ಪಂ. ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಲಾಗಿತ್ತು.
ಗ್ರಾ.ಪಂ. ಅಧ್ಯಕ್ಷೆ ಪಾವನ ಗಗನ್ ಮತ್ತು ಶಾಲಾ ವಿದ್ಯಾರ್ಥಿನಿ ಫಾತಿಮಾ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಪಾಲ್ಗೊಂಡ ಮಕ್ಕಳು ಶಾಲಾ ಪಕ್ಕದಲ್ಲಿರುವ ಹಳೆಯ ಕಟ್ಟಡವನ್ನು ತೆರವುಗೊಳಿಸುವುದು, ಹೈಟೆಕ್ ಶೌಚಾಲಯ ನಿರ್ಮಾಣ, ಚರಂಡಿ ಸ್ವಚ್ಛತೆ, ಅಂಗನವಾಡಿ ಕೇಂದ್ರ ಬಳಿ ಇರುವ ಕುಡಿಯುವ ನೀರಿನ ಟ್ಯಾಂಕ್ನ್ನು ಸ್ವಚ್ಛಗೊಳಿಸುವಂತೆ, ಶಾಲೆಯಲ್ಲಿ ಅಳವಡಿಸಿರುವ ಸಿಸಿ ಟಿವಿ ಕಳವು ಮಾಡಿರುವ ಕುರಿತು ಗಮನಕ್ಕೆ ತಂದರು. ಇನ್ನಿತರ ಬೇಡಿಕೆಗಳೂ ವ್ಯಕ್ತಗೊಂಡವು.
ನಾವು ಪ್ರತಿಷ್ಠಾಪನಾ ಸಂಸ್ಥೆಯ ನಿರ್ದೇಶಕಿ ಸುಮನ ಮ್ಯಾಥ್ಯು ಮಕ್ಕಳ ಗ್ರಾಮಸಭೆಯ ಉದ್ದೇಶದ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ. ಅಧ್ಯಕ್ಷೆ ಪಾವನ ಗಗನ್ ಮಾತನಾಡಿದರು. ವೇದಿಕೆಯಲ್ಲಿ ಶಾಲಾ ವಿದ್ಯಾರ್ಥಿಗಳಾದ ದೀಪಿಕಾ, ಫಾತಿಮಾ, ಫರ್ಹನ್, ಅಭಿಯಕೃಷ್ಣ ಇದ್ದರು. ಮಕ್ಕಳ ಗ್ರಾಮಸಭೆಯಲ್ಲಿ ಪಿಡಿಓ ಹರೀಶ್, ನಾವು ಪ್ರತಿಷ್ಠಾನಾ ಸಂಸ್ಥೆಯ ಸಂಸ್ಥಾಪಕ ಗೌತಮ್ ಕಿರಗಂದೂರು, ಸದಸ್ಯೆ ಸಲ್ಮಾಬಾನು, ಗ್ರಾ.ಪಂ. ಸದಸ್ಯರು ಪಾಲ್ಗೊಂಡಿದ್ದರು.