ಮಡಿಕೇರಿ, ಜ. ೪: ಕೊಡವ ಭಾಷೆಯನ್ನು ಭಾರತ ಸಂವಿಧಾನದ ೮ ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡಬೇಕಿರುವ ಹಿನ್ನೆಲೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮಾಹಿತಿ/ ವರದಿ ಒದಗಿಸಬೇಕಿದೆ.

ಆದ್ದರಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ತಾ.೫ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ವೀರಾಜಪೇಟೆಯ ಕೊಡವ ಸಮಾಜದಲ್ಲಿ ಮಹತ್ವದ ಸಭೆಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ನೇತೃತ್ವದಲ್ಲಿ ನಡೆಯಲಿದೆ.

ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ಇತರರು ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಕೊಡವ ಭಾಷಿಕ ವಿವಿಧ ಸಮಾಜದ ಪ್ರಮುಖರು, ಕೊಡವ ಭಾಷಾಭಿಮಾನಿಗಳು, ವಿವಿಧ ಕೊಡವ ಸಮಾಜಗಳ ಅಧ್ಯಕ್ಷರು, ಸಂಘ ಸಂಸ್ಥೆಗಳ ಮುಖ್ಯಸ್ಥರು, ಭಾಷಾ ತಜ್ಞರು, ಸಾಹಿತಿಗಳು, ಬರಹಗಾರರು, ಕಲಾವಿದರು ಪಾಲ್ಗೊಂಡು ಸಲಹೆ, ಮಾರ್ಗದರ್ಶನ ನೀಡಬಹುದಾಗಿದೆ.

ಹಾಗೆಯೇ ತಮ್ಮ ತಮ್ಮಲ್ಲಿ ಇರುವ ಕೊಡವ ಭಾಷೆ, ಸಂಸ್ಕೃತಿಯ ಬಗೆಗಿನ ಮಾಹಿತಿ, ಸಾಕ್ಷಾö್ಯಧಾರಗಳು, ಓಲೆಗರಿಗಳು, ಸಂಸ್ಕೃತಿಯ ಬಗೆಗಿನ ಬರಹಗಳು ಇದ್ದಲ್ಲಿ ಸಭೆಗೆ ತಂದು ಸಹಕರಿಸಬಹುದಾಗಿದೆ ಎಂದು ಕರ್ನಾಟಕ ಕೊಡವ ಅಕಾಡೆಮಿ ರಿಜಿಸ್ಟಾçರ್ ಚಿನ್ನಸ್ವಾಮಿ ಕೋರಿದ್ದಾರೆ.