ಮಡಿಕೇರಿ, ಜ. ೪: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾದರು.
ಈ ವೇಳೆ ಎಸ್ಪಿ ಅವರನ್ನು ಅಧಿಕೃತವಾಗಿ ಜಿಲ್ಲೆಗೆ ಸ್ವಾಗತಿಸಿದ ಶಾಸಕರು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉತ್ತಮವಾಗಿ ಕೆಲಸ ಮಾಡುವಂತೆ ಹೇಳಿದರು.