ನಾಪೋಕ್ಲು, ಜ. ೪: ಶಾಲಾ ಮಕ್ಕಳು ತಮ್ಮ ವಿದ್ಯಾಭ್ಯಾಸದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಅವರ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು.
ಚೇನಂಡ ಕೌಟುಂಬಿಕ ಹಾಕಿ ಉತ್ಸವದ ಹಿನ್ನೆಲೆಯಲ್ಲಿ ಚೇನಂಡ ಕುಟುಂಬಸ್ಥರು ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಂತರ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಆಟದಲ್ಲಿ ಗೆಲುವು-ಸೋಲು ಸಹಜ. ಎರಡನ್ನು ಸಮಾನವಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸನ್ನು ಕಾಣಲು ಪ್ರಯತ್ನಿಸುವುದು ನಿಜವಾದ ಕ್ರೀಡಾ ಸ್ಪೂರ್ತಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಈ ಸಂದರ್ಭ ಚೇನಂಡ ಕುಟುಂಬದ ಅಧ್ಯಕ್ಷ ಪಿ. ಕರುಂಬಯ್ಯ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಬೋಪಣ್ಣ, ಒಲಂಪಿಯನ್ ಚೆಪ್ಪುಡಿರ ಪೂಣಚ್ಚ ಹಾಗೂ ಚೇನಂಡ ಕುಟುಂಬಸ್ಥರು ಉಪಸ್ಥಿತರಿದ್ದರು.