ಮಡಿಕೇರಿ, ಜ. ೨: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ ೨೦೨೬ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. ೫೦ ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:೦೮೦-೨೨೧೦೭೭೦೫) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ hಣಣಠಿs://ಞಠಿಠಿ.ಞಚಿಡಿಟಿಚಿಣಚಿಞಚಿ.gov.iಟಿ (ಆನ್‌ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ)ನಲ್ಲಿ ಕೂಡ ಈ ಶೇ.೫೦ ರಿಯಾಯಿತಿ ಲಭ್ಯವಿದೆ.