ಮಡಿಕೇರಿ, ಜ. ೪: ೨೦೨೬-೨೭ರಲ್ಲಿ ನಡೆಯಲಿರುವ ೧೬ನೇ ರಾಷ್ಟಿçÃಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ `ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ೨೩ನೇ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ತಾ. ೮ ರಂದು ಭಾಗಮಂಡಲದಲ್ಲಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ ೧೦.೩೦ ಗಂಟೆಗೆ ಭಾಗಮಂಡದಲ್ಲಿ ಮಾನವ ಸರಪಳಿ ನಿರ್ಮಿಸಲಾಗುವುದು ಮತ್ತು ಕೊಡವರ ಪರವಾದ ಸಿಎನ್‌ಸಿಯ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ.