ಕಣಿವೆ, ಜ. ೪: ಕುಶಾಲನಗರ ರಥಬೀದಿಯಲ್ಲಿರುವ ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾರ್ವಜನಿಕರಿಗಾಗಿ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅದರಂತೆಯೇ ಸಪ್ತಾಹದ ಅಂಗವಾಗಿ ಭಾನುವಾರ ನಗರದ ಜಂಪ್ಸ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗಾಗಿ ಷಟಲ್ ಬ್ಯಾಡ್ಮಿಂಟನ್ ಕ್ರೀಡಾವಳಿ ಹಮ್ಮಿಕೊಳ್ಳಲಾಗಿತ್ತು. ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧೆಡೆಗಳಿಂದ ೧೨೫ ಕ್ಕೂ ಹೆಚ್ಚು ಹಿರಿಯ ಕಿರಿಯ ಪ್ರಾಯದ ಆಟಗಾರರು ಪಾಲ್ಗೊಂಡಿದ್ದರು. ಕ್ರೀಡಾಕೂಟಕ್ಕೆ ಅಂತರರಾಷ್ಟಿçÃಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಆಟಗಾರರು ಫಿಟ್‌ನೆಸ್ ನಿರ್ವಹಣೆಯ ಮೂಲಕ ಉತ್ತಮ ಆರೋಗ್ಯ ಹೊಂದಲು ಬ್ಯಾಡ್ಮಿಂಟನ್ ಅತ್ಯುತ್ತಮ ಆಟ. ಆರ್ಯವೈಶ್ಯ ಮಂಡಳಿ ಮಾಜಿ ಅಧ್ಯಕ್ಷ ರಾಜಗೋಪಾಲ್, ಆರ್ಯವೈಶ್ಯ ಮಹಾಸಭಾ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಹುಣಸೂರು ರಾಕೇಶ್ ಮಾತನಾಡಿದರು.
ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕುಟ್ಟಂಡ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಬಿ.ಜಿ.ಮಂಜುನಾಥ್, ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಜೋಷಿ, ಆರ್ಯವೈಶ್ಯ ಮಂಡಳಿ ಕೊಡಗು ಜಿಲ್ಲಾ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಕುಶಾಲನಗರ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಉಪಾಧ್ಯಕ್ಷ ಬಿ.ಎಲ್.ಅಶೋಕ್ ಕುಮಾರ್, ಕಾರ್ಯದರ್ಶಿ ಕೆ. ಪ್ರವೀಣ್, ನಿರ್ದೇಶಕರಾದ ಎಸ್.ಎನ್. ನಾಗೇಂದ್ರ, ಕೆ.ಜೆ. ಸತೀಶ್, ನಟರಾಜು, ಸಪ್ತಾಹದ ಯೋಜನಾಧಿಕಾರಿ ಎ.ಎಸ್. ಕುಮಾರ್ ಇದ್ದರು.