ಮಡಿಕೇರಿ, ಜ. ೪: ಮಡಿಕೇರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಸ್ಥಾಪಕರಾದ ಎ.ಓ. ಹ್ಯೂಂ ಮತ್ತು ದೇಶದ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿ ಸೇರಿದಂತೆ ಹಲವಾರು ಮಂದಿಯನ್ನು ನೆನಪಿಸಿಕೊಳ್ಳುವ ದಿನ ಇದಾಗಿದೆ ಎಂದರು.
ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಕೆ.ಜಿ. ಪೀಠರ್ ಸ್ವಾಗತಿಸಿದರು. ಫ್ಯಾನ್ಸಿ ಪಾರ್ವತಿ, ಪ್ರೇಮ ನಿಂಗಪ್ಪ, ಕೌಸರ್, ಕವನ್ ಕೊತ್ತೋಳಿ, ಕೆ.ಆರ್. ದಿನೇಶ್, ಹಫೀಜ್ ಮಾತನಾಡಿದರು. ಸಭೆಯಲ್ಲಿ ಲೀಲಾ ಶೇಷಮ್ಮ, ಮೂಡ ಸದಸ್ಯ ಆರ್.ಪಿ. ಚಂದ್ರಶೇಖರ್ ಮತ್ತಿತರರು ಭಾಗವಹಿಸಿದ್ದರು. ಶಶಿಕಲಾ ವಂದಿಸಿದರು.