ಗೋಣಿಕೊಪ್ಪಲು, ಜ.೪: ಪೊನ್ನಂಪೇಟೆ ತಾಲೂಕು ಶ್ರೀಮಂಗಲ ಠಾಣಾ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಗ್ರಾಮದ ಬಿ.ಎಚ್.ರವಿ ಎಂಬವರಿಗೆ ಸೇರಿದ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಮನೆಯ ಮುಂಭಾಗ ಹಾಗೂ ಒಳಗಿನ ಪೀಠೋಪಕರಣಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಸಂಭವಿಸಿದೆ.

ಸುದ್ದಿ ತಿಳಿದ ಶ್ರೀಮಂಗಲ ಪೋಲಿಸ್ ಠಾಣೆಯ ಠಾಣಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಕುಟ್ಟ ವೃತ್ತ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.