ನಾಪೋಕ್ಲು, ಜ. ೪: ಇಲ್ಲಿಯ ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿ ಸಭೆ ಆಯೋಜಿಸಲಾಯಿತು.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಸುಮತಿ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ ಸೇರಿದಂತೆ ವಿವಿಧ ಕಾನೂನು ಕಾಯ್ದೆಗಳ ಬಗ್ಗೆ ಸಮಗ್ರ ತಿಳುವಳಿಕೆಯನ್ನು ನೀಡಿ ಅಪರಾಧಗಳಲ್ಲಿ ತೊಡಗಿರುವ ಮಕ್ಕಳ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು ಎಂದರು.

ಕಾನೂನು ಪರಿವೀಕ್ಷಣಾಧಿಕಾರಿ ತುಳಸಿ ಮಾತನಾಡಿ, ಕಾನೂನು ಬಾಹಿರ ಚಟುವಟಿಕೆಗಳು ಕಂಡುಬAದಲ್ಲಿ ಅವುಗಳನ್ನು ತಡೆಗಟ್ಟಿ ಕಾನೂನು ಸುವ್ಯವಸ್ಥೆಗೆ ಸಹಕರಿಸುವಂತೆ ಮನವಿ ಮಾಡಿಕೊಂಡರು.

ಕಂದಾಯ ಪರಿವೀಕ್ಷಕ ರವಿಕುಮಾರ್ ಮಾತನಾಡಿ, ಚುನಾವಣೆಗೆ ಸಂಬAಧಿಸಿದ ನೋಂದಾವಣೆ, ಗುರುತಿನ ಚೀಟಿ ಬಗ್ಗೆ ನಮ್ಮ ಸಿಬ್ಬಂದಿಗಳ ಮೂಲಕ ನಾಗರಿಕರಿಗೆ ತಿಳುವಳಿಕೆಯನ್ನು ನೀಡಲಾಗುತ್ತಿದೆ. ಅದಕ್ಕೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿಕೊಂಡರು

ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಾಚೇಟಿರ ಕುಸು ಕುಶಾಲಪ್ಪ, ಬಿ.ಎಂ. ಪ್ರತೀಪ, ಪಿಡಿಓ ಚೊಂದಕ್ಕಿ, ಸಹಾಯಕ ಠಾಣಾ ಅಧಿಕಾರಿ ಮೋಹನ್, ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿ ಪ್ರಮುಖರು, ಸ್ವಸಹಾಯ ಸಂಘದ ಅಧ್ಯಕ್ಷೆ ಟಿ.ವಿ. ಭವಾನಿ, ಶಾಲಾ ಶಿಕ್ಷಕರು, ಆರೋಗ್ಯ ಇಲಾಖೆ, ಸಂಜೀವಿನಿ, ಅಂಗನವಾಡಿ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತಿತರರು ಪಾಲ್ಗೊಂಡಿದ್ದರು.