ಮಡಿಕೇರಿ, ಜ.೪ : ಮಾನವ ಕಳ್ಳ ಸಾಗಾಣಿಕೆ ತಡೆ, ಮಕ್ಕಳ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಸೂಚನೆ ನೀಡಿದ್ದಾರೆ.

ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳೊAದಿಗೆ ಸಭೆ ನಡೆಸಿದ ಅವರು ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಮುಂತಾದ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಶುಭಾ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಉಪಸ್ಥಿತರಿದ್ದರು.

ವೀರಾಜಪೇಟೆ ಠಾಣೆಗೆ ಭೇಟಿ

ವೀರಾಜಪೇಟೆ ನಗರ ಠಾಣೆ ಮತ್ತು ವೀರಾಜಪೇಟೆ ಗ್ರಾಮಾಂತರ ಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವ ಕುರಿತು ಚರ್ಚಿಸಿ ಸೂಚನೆಗಳನ್ನು ನೀಡಿದರು.

ಸಿದ್ದಾಪುರಕ್ಕೆ ಭೇಟಿ

ಸಿದ್ದಾಪುರ, ಜ. ೪: ಸಿದ್ದಾಪುರ ಪೊಲೀಸ್ ಠಾಣೆಗೆ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಭೇಟಿ ನೀಡಿದರು. ಪೊಲೀಸ್ ಅಧಿಕಾರಿಗಳೊಂದಿಗೆ ಹಲವು ಮಾಹಿತಿ ಪಡೆದುಕೊಂಡರು. ಅಲ್ಲದೆ ಕಡತಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭ ಮಡಿಕೇರಿ ವಿಭಾಗದ ಡಿವೈಎಸ್ಪಿ ಸೂರಜ್, ಸಿ.ಐ. ರಾಜು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.