ಗೋಣಿಕೊಪ್ಪಲು, ಜ. ೫: ಪಶು ವೈದ್ಯಕೀಯ ಇಲಾಖೆಯಲ್ಲಿ ಸುದೀರ್ಘ ೩೨ ವರ್ಷಗಳ ಕಾಲ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪೊನ್ನಂಪೇಟೆ ಪಶುವೈದ್ಯ ಆಸ್ಪತ್ರೆಯ ಪಿ.ಟಿ. ಸುರೇಶ್ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಬೀಳ್ಕೊಡಲಾಯಿತು.

ಪೊನ್ನಂಪೇಟೆ ಪಶು ವೈದ್ಯ ಇಲಾಖೆಯ ಸಭಾಂಗಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಕೊಡಗು ಜಿಲ್ಲಾ ಉಪ ನಿರ್ದೇಶಕ ಡಾ. ಲಿಂಗರಾಜು, ದೊಡ್ಡಮನಿ ಅಧ್ಯಕ್ಷತೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪೊನ್ನಂಪೇಟೆ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ ಡಾ. ಬಿ.ಜಿ. ಗಿರೀಶ್, ಬಾಳೆಲೆ ಪಶುವೈದ್ಯ ಆಸ್ಪತ್ರೆಯ ಡಾ. ಭವಿಷ್ಯ ಕುಮಾರ್, ಕಾನೂರು ಆಸ್ಪತ್ರೆಯ ಡಾ. ಚಂದ್ರಶೇಖರ್ ಮಾತನಾಡಿ, ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಸುರೇಶ್ ಅವರÀ ಕಾರ್ಯವನ್ನು ಶ್ಲಾಘಿಸಿದರು.