ನಾಪೋಕ್ಲು, ಜ. ೫: ಕಕ್ಕಬೆ ಕೇಂದ್ರ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಕ್ಕಬೆ ಕೇಂದ್ರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೇಟೋಳಿರ ಪಿ. ಕುಟ್ಟಪ್ಪ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪೈಯಡಿ ಹಂಸ, ಬಾತ್ಮೀದಾರ ಕಲ್ಯಾಟಂಡ ಸುಧಾ ಗಣಪತಿ, ನಿರ್ದೇಶಕರಾದ ಬೊಳಿಯಾಡಿರ ಸಂತು ಸುಬ್ರಮಣಿ, ಅಂಜಪರವAಡ ಎ. ಕುಶಾಲಪ್ಪ, ಮುಕ್ಕಾಟಿರ ರಮೇಶ್, ಕೋಟೆರ ನೈಲ್ ಚಂಗಪ್ಪ, ಪರದಂಡ ಪ್ರಮೀಳಾ ಪೆಮ್ಮಯ್ಯ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಬಿ ಲೀಲಾವತಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ನಡೆದ ಧ್ವಜಾರೋಹಣವನ್ನು ಕಕ್ಕಬ್ಬೆ-ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪ ಲೋಕೇಶ್ ನೆರವೇರಿಸಿದರು. ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ. ನಿರ್ದೇಶಕ ಬೊಳಿಯಾಡಿರ ಸಂತು ಸುಬ್ರಮಣಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಅನಿಲ್ ರಾಜ್ ವರದಿ ವಾಚಿಸಿದರು. ಶಿಕ್ಷಕಿ ಪಿ.ಸಿ. ಬಬಿತ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶರತ್ ವಂದಿಸಿದರು.