ನಾಪೋಕ್ಲು, ಜ. ೫: ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ನಿವೃತ್ತಗೊಂಡ ಹಿನ್ನೆಲೆ ನಾಪೋಕ್ಲು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.
ಈ ಸಂದರ್ಭ ಸ್ಥಳೀಯ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷ ಕಂಗಾAಡ ಶಶಿ ಮಂದಣ್ಣ, ಮಾಜಿ ಅಧ್ಯಕ್ಷ ಎಂ.ಎಚ್. ಅಬ್ದುಲ್ ಹಾಗೂ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.