ಸೋಮವಾರಪೇಟೆ,ಜ.೫: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸೋಮವಾರಪೇಟೆ ಪೊಲೀಸರು ನಡೆಸಿದ ವಾಹನ ತಪಾಸಣಾ ವಿಶೇಷ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಹಾಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ೮೧ ಕೇಸ್‌ಗಳನ್ನು ದಾಖಲಿಸಿದ್ದಾರೆ.
ನೂತನ ವರ್ಷಾಚರಣೆಯಲ್ಲಿ ಬೇಕಾಬಿಟ್ಟಿ ಓಡಾಟದ ಮೂಲಕ ಸಂಚಾರಿ ನಿಯಮ ಉಲ್ಲಂಘನೆ, ಮದ್ಯಪಾನ ಮಾಡಿ ವಾಹನ ಚಾಲನೆ ಸೇರಿದಂತೆ ಇನ್ನಿತರ ಸಂಚಾರಿ ನಿಯಮಗಳನ್ನು ಗಾಳಿದ ತೂರಿದ ವಾಹನ ಸವಾರರ ಮೇಲೆ ಒಟ್ಟು ೮೧ ಕೇಸ್‌ಗಳನ್ನು ದಾಖಲಿಸಿ ೯೦,೫೦೦ ರೂ. ದಂಡ ವಿಧಿಸಿದ್ದಾರೆ.
ಅಂತೆಯೇ ಪಟ್ಟಣದ ಕಕ್ಕೆಹೊಳೆ ಜಂಕ್ಷನ್ ಹಾಗೂ ಮಹಾತ್ಮಾ ಗಾಂಧೀಜಿ ವೃತದಲ್ಲಿ ಂಓPಖ ಅಅಖಿಗಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಈ ಕ್ಯಾಮೆರಾಗಳು ರಸ್ತೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಸವಾರರ ಫೋಟೋಗಳನ್ನು ವಾಹನಗಳ ನಂಬರ್ ಸಹಿತ ಸೆರೆ ಹಿಡಿಯುತ್ತಿವೆ. ಈ ಮೂಲಕವೂ ಠಾಣೆಯಲ್ಲಿಯೇ ಕುಳಿತು ಪೊಲೀಸರು ಮೊಕದ್ದಮೆ ದಾಖಲಿಸಿಕೊಳ್ಳುತ್ತಿದ್ದಾರೆ.
ಈವರೆಗೆ ಪೊಲೀಸರ ಕಣ್ತಪ್ಪಿಸಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದವರು; ಪೊಲೀಸರು ಈ ರಸ್ತೆಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದರೆ ಬೇರೊಂದು ರಸ್ತೆಯ ಮೂಲಕ ಎಸ್ಕೇಪ್ ಆಗುತ್ತಿದ್ದ ವಾಹನ ಸವಾರರು; ಅದರಲ್ಲೂ ವಿಶೇಷವಾಗಿ ದ್ವಿಚಕ್ರ ವಾಹನ ಚಾಲಕರು ಇನ್ನು ಮುಂದೆ ಸಂಚಾರ ನಿಯಮ ಪಾಲನೆಯಿಂದ ತಪ್ಪಿಸಿಕೊಳ್ಳಲು ಕಷ್ಟಸಾಧ್ಯವಾಗಿದೆ. ಇದನ್ನೂ ಮೀರಿದರೆ ಅನಿವಾರ್ಯವಾಗಿ ದಂಡ ಕಟ್ಟಬೇಕಾಗುತ್ತದೆ.
ಈವರೆಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಹಲವಷ್ಟು ಪ್ರಕರಣಗಳಲ್ಲಿ ಪೊಲೀಸರು ಹಿಡಿದರೆ, ಅವರೊಂದಿಗೆ ವಾಗ್ವಾದ ನಡೆಸುವುದು, ರಾಜಕೀಯ ನಾಯಕರುಗಳು, ಪ್ರಭಾವಿಗಳ ಮುಖಾಂತರ ಶಿಫಾರಸ್ಸು ಮಾಡಿಸುವ ಪ್ರಯತ್ನ ಕೆಲವು ಸಲ ನಡೆಯುತ್ತಿತ್ತು. ಇದು ಪೊಲೀಸರು ಮತ್ತು ಪ್ರಭಾವಿಗಳು, ರಾಜಕೀಯ ಮುಖಂಡರಿಗೂ ಇರಿಸು-ಮುರಿಸು ಆಗುತ್ತಿತ್ತು. ಅತ್ತ ಕೇಸ್ ಮಾಡಲೂ ಆಗದೇ ಇತ್ತ ಬಿಟ್ಟು ಕಳುಹಿಸಲೂ ಆಗದ ಸನ್ನಿವೇಶಗಳಿಗೆ ಪೊಲೀಸರು ಸಿಲುಕುತ್ತಿದ್ದರು.
ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘನೆಯ ದೃಶ್ಯಗಳನ್ನು ಸಿ.ಸಿ. ಕ್ಯಾಮೆರಾಗಳೇ ಸೆರೆ ಹಿಡಿದು ಠಾಣೆಗೆ ರವಾನಿಸುವುದರಿಂದ ಇಂತಹ ಇರಿಸು ಮುರಿಸಿನಿಂದ ಪೊಲೀಸರು ತಪ್ಪಿಸಿಕೊಳ್ಳುವಂತಾಗಿದೆ. ಠಾಣೆಯಲ್ಲಿಯೇ ಕುಳಿತು ವಾಹನದ ನೋಂದಣಿ ಸಂಖ್ಯೆಯ ಆಧಾರದ ಮೇರೆ ಮಾಲೀಕರಿಗೆ ನೋಟೀಸ್ ಜಾರಿಯಾಗುತ್ತದೆ. ಅವರುಗಳು ಠಾಣೆಗೆ ಅಥವಾ ನ್ಯಾಯಾಲಯಕ್ಕೆ ಹಾಜರಾಗಿ ದಂಡ ಕಟ್ಟಲೇಬೇಕಾಗುತ್ತದೆ.
ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ತಪ್ಪಿದ್ದಲ್ಲಿ ಪೊಲೀಸರು ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಎಚ್ಚರಿಕೆ ನೀಡಿರುವ ಸೋಮವಾರಪೇಟೆ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಮುದ್ದು ಮಾದೇವ ಅವರು, ಸಂಚಾರ ನಿಯಮ ಪಾಲನೆಯಿಂದ ಬೇರೊಬ್ಬರ ಜೀವ ಉಳಿಸುವುದರೊಂದಿಗೆ ನಮ್ಮ ಜೀವ-ಜೀವನವನ್ನೂ ಉಳಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ. - ವಿಜಯ್