ನಾಪೋಕ್ಲು, ಜ. ೫: ಕಿಗ್ಗಾಲು ಗ್ರಾಮದ ನಿಧಿ ಎಂ.ಎಸ್. ತ.ರಾ.ಸು. ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಧಿ ಎಂ.ಎಸ್. ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಬೆಂಗಳೂರಿನ ಜನ್ಮಭೂಮಿ ಸಾಂಸ್ಕೃತಿಕ ನಾಗರಿಕ ವೇದಿಕೆಯ ವತಿಯಿಂದ ದ್ವಿತೀಯ ಪಿ.ಯು. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ತ.ರಾ.ಸು. ಪ್ರಶಸ್ತಿಯನ್ನು ನಿಧಿ ಎಂ.ಎಸ್. ಪಡೆದುಕೊಂಡಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಕಾರಣ ಈ ಪ್ರಶಸ್ತಿಗೆ ಅವರನ್ನು ಆಯ್ಕೆಗೊಳಿಸಲಾಗಿತ್ತು.

ಬೆಂಗಳೂರಿನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯ ಇಂಜಿನಿಯರಿAಗ್ ವಿದ್ಯಾರ್ಥಿಯಾಗಿರುವ ನಿಧಿ ಎಂ.ಎಸ್. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಯ ಕಿಗ್ಗಾಲು ಗ್ರಾಮದ ನಿವಾಸಿ ಮೊಟ್ಟೆಮನೆ ಶ್ರೀಧರ್ ಮತ್ತು ರೈನಾ ದಂಪತಿಯ ಪುತ್ರಿ.