ಪೆರಾಜೆ, ಜ. ೫: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಿನೇದಿನೇ ತೀವ್ರವಾಗಿ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ, ಗ್ರಾಮ ಪಂಚಾಯತ್ ಸದಸ್ಯ ಪಿ.ಎಲ್. ಸುರೇಶ್ ಅವರು ಸಂಪಾಜೆ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಸAಬAಧಪಟ್ಟ ಅಧಿಕಾರಿಗಳು ಹಾಗೂ ಪಂಚಾಯತ್ ಆಡಳಿತ ಕೂಡಲೇ ಎಚ್ಚೆತ್ತು, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಹಾಗೂ ಸಮರ್ಪಕ ಪರಿಹಾರ ಒದಗಿಸಬೇಕೆಂದು ಪಿ.ಎಲ್. ಸುರೇಶ್ ಆಗ್ರಹಿಸಿದ್ದಾರೆ.