ಕುಶಾಲನಗರ, ಜ. ೫: ಕುಶಾಲನಗರ ಸಮೀಪದ ಕೊಪ್ಪ ಗ್ರಾಮ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪೂಜಾ ಕಾರ್ಯಕ್ರಮ ನಡೆಯಿತು.
ಮೂರು ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದು ದೇವರಿಗೆ ಫಲ ಪಂಚಾಮೃತ ಅಭಿಷೇಕ ಪುಷ್ಪಾಲಂಕಾರ ಸಂಜೆ ೬ ಗಂಟೆಗೆ ವೈಕುಂಠ ದ್ವಾರ ಪ್ರವೇಶ ಜರುಗಿತು.
ನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆದು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಂಜೆ ರಂಗಪೂಜೆ ನಂತರ ಸುತ್ತಮುತ್ತಲ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ದೇವಾಲಯಕ್ಕೆ ಫಲತಾಂಬೂಲದೊAದಿಗೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಭಾವದಿಂದ ಪೂಜೆ ಸಲ್ಲಿಸಿದರು.
ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ನಂದೀಶ್ ಮತ್ತು ಆಡಳಿತ ಮಂಡಳಿ ಸದಸ್ಯರು ಇದ್ದರು.