ಕಣಿವೆ, ಜ. ೬: ಹದಿ ಹರೆಯದ ಹೆಣ್ಣು ಮಕ್ಕಳು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ನಗರದ ಬಾಲ್ಯ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ.ದೇವಿಕಾ ಶಿವಕುಮಾರ್ ಕರೆ ನೀಡಿದರು. ವಾಸವಿ ಸಪ್ತಾಹದ ಅಂಗವಾಗಿ ಸ್ಥಳೀಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ಹೆಣ್ಣುಮಕ್ಕಳು ಮಾಸಿಕ ಋತುಚಕ್ರದ ಅವಧಿಯಲ್ಲಿ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ನಿಗಾ ವಹಿಸಬೇಕು ಎಂದರು.
ವಾಸವಿ ಯುವತಿ ಮಂಡಳಿ ಅಧ್ಯಕ್ಷೆ ಅನುಷಾ ಅರ್ಜುನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರ್ಯವೈಶ್ಯ ಮಹಿಳಾ ಮಂಡಳಿ ಅಧ್ಯಕ್ಷೆ ವಾಣಿ ಮಹೇಶ್, ಆರ್ಯವೈಶ್ಯ ಮಂಡಳಿ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಕಾರ್ಯದರ್ಶಿ ಕೆ.ಪ್ರವೀಣ್, ವಾಸವಿ ಸಪ್ತಾಹದ ಸಂಯೋಜಕ ಎ.ಎಸ್.ಕುಮಾರ್, ಶಾಲಾ ಮುಖ್ಯ ಶಿಕ್ಷಕ ನವೀನ್ ಕುಮಾರ್, ಶಿಕ್ಷಕಿ ಸೌಮ್ಯ ಇದ್ದರು.