ಮಡಿಕೇರಿ, ಜ. ೭: ಹೊದ್ದೂರು ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಉಚಿತವಾಗಿ ಸ್ವೆಟರ್ ವಿತರಿಸಲಾಯಿತು.
ಪಂಚಾಯಿತಿ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷ ಹೆಚ್.ಎ. ಹಂಸ ಅವರು ಸ್ವೆಟರ್ ವಿತರಿಸಿದರು. ಈ ಸಂದರ್ಭ ಪಂಚಾಯಿತಿ ಸದಸ್ಯರಾದ ಕಡ್ಲೇರ ಟೈನಿ, ವೈ.ಎಸ್. ಲಕ್ಷಿö್ಮ, ಮಾಜಿ ಅಧ್ಯಕ್ಷೆ ಕುಸುಮಾವತಿ, ಕಾರ್ಯದರ್ಶಿ ಚಂದ್ರಶೇಖರ್, ಅಭಿವೃದ್ಧಿ ಅಧಿಕಾರಿ ವತ್ಸಲಾ, ನಿರ್ಗಮಿತ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಸಿಬ್ಬಂದಿ ಹೆಚ್.ಟಿ. ಬಾಬು ಹಾಗೂ ಶಾಲಾ ಮುಖ್ಯ ಶಿಕ್ಷಕಿ ಪಾರ್ವತಿ ಕೆ.ಎಂ. ಉಪಸ್ಥಿತರಿದ್ದರು.