ಮಡಿಕೇರಿ, ಜ. ೬: ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ. ಗಣೇಶ್ ರೈ ಅವರು ವಿನ್ಯಾಸಗೊಳಿಸಿರುವ ಶ್ರೀ ಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥಾ ಪುಸ್ತಕ ಲೋಕಾರ್ಪಣೆಗೊಂಡಿತು.
ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಅರ್ಪಿಸಿದ ನಂತರ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಶ್ರೀ ಓಂಕಾರೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅಪ್ಪನೆರವಂಡ ಚುಮ್ಮಿ ದೇವಯ್ಯ ಅವರು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮೂಡಿಬಂದಿರುವ ಚಿತ್ರಕಥಾ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.
ಮಡಿಕೇರಿ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಶ್ರೀ ಓಂಕಾರೇಶ್ವರ ದೇವಸ್ಥಾನ ಸಮಿತಿಯ ಮಾಜಿ ಅಧ್ಯಕ್ಷ ಕೊಂಗAಡ ಎಸ್. ದೇವಯ್ಯ ಅವರು ಅತಿಥಿಗಳಾಗಿ ಪಾಲ್ಗೊಂಡು ಪ್ರಥಮ ಕೃತಿಯನ್ನು ಸ್ವೀಕರಿಸಿದರು.
೧೬ನೇ ಶತಮಾನದಲ್ಲಿ ಕೊಡಗನ್ನು ಆಳಿದ ಹಾಲೇರಿ ವಂಶದ ರಾಜ ಮನೆತನದ ಲಿಂಗರಾಜೇAದ್ರ ಒಡೆಯರ್ ೧೮೨೦ ರಲ್ಲಿ ನಿರ್ಮಿಸಿರುವ ಶ್ರೀ ಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥೆ ಕೊಡಗಿನ ಕಲಾವಿದ ಬಿ.ಕೆ. ಗಣೇಶ್ ರೈ ಅವರ ಪರಿಕಲ್ಪನೆಯಲ್ಲಿ ಡಿಜಿಟಲ್ ಗ್ರಾಫಿಕ್ಸ್ ಚಿತ್ರದೊಂದಿಗೆ ವಿನ್ಯಾಸಗೊಂಡಿದೆ.
ಪುಸ್ತಕ ಲೋಕಾರ್ಪಣೆ ಗೊಂಡ ನಂತರ ಮಾತನಾಡಿದ ಬಿ.ಕೆ. ಗಣೇಶ್ ರೈ, ಮಡಿಕೇರಿಯನ್ನು ಆಳಿರುವ ಹಾಲೇರಿ ವಂಶದ ರಾಜಮನೆತನದ ವಿವರ, ಐತಿಹಾಸಿಕ ಅರಮನೆ ಹಾಗೂ ಶ್ರೀ ಓಂಕಾರೇಶ್ವರ ದೇವಾಲಯ ನಿರ್ಮಾಣದ ಹಿನ್ನೆಲೆಯನ್ನು ವರ್ಣರಂಜಿತ ಚಿತ್ರಗಳೊಂದಿಗೆ ಸುಂದರವಾಗಿ ಮೂಡಿ ಬಂದಿದೆ.
ಚಿತ್ರಕಥಾ ಪುಸ್ತಕ ಮಾಲಿಕೆಯು ಕನ್ನಡ ಮತ್ತು ಇಂಗೀಷ್ ಭಾಷೆಯಲ್ಲಿ ಮುದ್ರಣವಾಗಿದೆ ಎಂದರು.
ಕೊಡಗಿನ ಕುಲದೇವತೆ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರಕಥೆ ಡಿಜಿಟಲ್ ಗ್ರಾಫಿಕ್ಸ್ನಲ್ಲಿ ಕನ್ನಡ, ಇಂಗ್ಲೀಷ್, ಅರೆಭಾಷೆ ಮತ್ತು ತಮಿಳು ಭಾಷೆಯಲ್ಲಿ ಅಕ್ಟೋಬರ್‌ನಲ್ಲಿ ಕಾವೇರಿ ತುಲಾ ಸಂಕ್ರಮಣದAದು ಬಿಡುಗಡೆಯಾಗಿತ್ತು. ಇದೀಗ ಬಿಡುಗಡೆಗೊಂಡಿರುವ ಶ್ರೀ ಓಂಕಾರೇಶ್ವರ ದೇವಾಲಯದ ಚಿತ್ರಕಥಾ ಪುಸ್ತಕ ಮಡಿಕೇರಿಯ ಐಶ್ವರ್ಯ ಕ್ರೀಯೇಶನ್ಸ್ ರವರ ೨೭ನೇ ಪ್ರಕಟಣೆಯಾಗಿದೆ.