ಉಚಿತ ಆರೋಗ್ಯ ತಪಾಸಣೆ-ಚಿಕಿತ್ಸಾ ಶಿಬಿರಸೋಮವಾರಪೇಟೆ, ಜ. ೭: ಲಯನ್ಸ್ ಕ್ಲಬ್-ಸೋಮವಾರಪೇಟೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ, ತಾಲೂಕು ಒಕ್ಕಲಿಗರ ಸಂಘ ಹಾಗೂ ಸೋಮವಾರಪೇಟೆ ತಾಲೂಕು ಹೋಂಸ್ಟೇ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ತಾ. ೧೨ ರಂದು ಒಕ್ಕಲಿಗರ ಸಮುದಾಯ ಭವನದಲ್ಲಿ ಬೆಳಿಗ್ಗೆ ೯.೩೦ ರಿಂದ ಸಂಜೆ ೪ ಗಂಟೆಯವರೆಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಲಯನ್ಸ್ ಅಧ್ಯಕ್ಷ ಬಿ.ಎಸ್. ರಾಮಶೆಟ್ಟಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ತಜ್ಞ ವೈದ್ಯರ ಸೇವೆಯನ್ನು ಉಚಿತವಾಗಿ ಒದಗಿಸುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಶಿಬಿರದಲ್ಲಿ ಜನರಲ್ ಮೆಡಿಸಿನ್ ಹಾಗೂ ಜನರಲ್ ಸರ್ಜರಿ, ಪ್ರಸೂತಿ ಮತ್ತು ಸ್ತಿçÃರೋಗ, ಮಕ್ಕಳ ಚಿಕಿತ್ಸಾ ವಿಭಾಗ, ಮೂಳೆ ಹಾಗೂ ಕೀಲು ಚಿಕಿತ್ಸೆಯೊಂದಿಗೆ ಕಣ್ಣು, ಕಿವಿ, ಮೂಗು ಮತ್ತು ಗಂಟಲು ಚಿಕಿತ್ಸೆ ಲಭ್ಯವಿರಲಿದೆ ಎಂದರು.
ಇದಲ್ಲದೆ ಚರ್ಮರೋಗ, ದಂತ ಚಿಕಿತ್ಸೆ, ಮಾನಸಿಕ ಆರೋಗ್ಯ ಮತ್ತು ಶ್ವಾಸಕೋಶ ಸಂಬAಧಿತ ಸಮಸ್ಯೆಗಳಿಗೂ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ಸಲಹೆ ನೀಡಲಾಗುವುದು. ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆ ತಪಾಸಣೆ, ಉಚಿತ ಇಸಿಜಿ ಹಾಗೂ ಎಕ್ಸ್ರೇ ಪರೀಕ್ಷೆಗಳನ್ನು ಸಹ ಶಿಬಿರದಲ್ಲಿ ನಡೆಸಲಾಗುತ್ತದೆ. ಸಾರ್ವಜನಿಕರ ಆರೋಗ್ಯ ಜಾಗೃತಿಗೆ ನೆರವಾಗುವ ಉದ್ದೇಶದಿಂದ ರಕ್ತದಾನ ಶಿಬಿರ ಹಾಗೂ ಅಂಗಾAಗ ದಾನ ನೋಂದಣಿ ವ್ಯವಸ್ಥೆಯನ್ನೂ ಏರ್ಪಡಿಸಲಾಗಿದೆ. ಅಗತ್ಯವಿರುವವರಿಗೆ ಉಚಿತ ಔಷಧ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಶಿಬಿರದ ಪ್ರಯೋಜನ ಪಡೆಯಲು ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ತರಬೇಕು. ಹೆಚ್ಚಿನ ಮಾಹಿತಿಗಾಗಿ ಮೊ: ೯೪೪೯೧೬೯೮೯೭, ೭೬೨೪೮೭೬೩೨೧, ೯೪೮೩೧೧೦೩೯೧ ಸಂಪರ್ಕಿಸಬಹುದು. ಗೋಷ್ಠಿಯಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ.ರೋಹಿತ್, ಲಯನ್ಸ್ ಮಾಜಿ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಇದ್ದರು.