ಚೆಟ್ಟಳ್ಳಿ, ಜ. ೬: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಕ್ಕರೆ-ವಾಲ್ನೂರು ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನಿತಾ ಮಂಜುನಾಥ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಮನವಿಯ ಮೇರೆಗೆ ವ್ಯವಸ್ಥಾಪಕ ಕಣ್ಣನ್ ಅವರ ಮುಖಾಂತರ ಎಸ್‌ಎಲ್‌ಎನ್ ಸಂಸ್ಥೆಯ ಮಾಲೀಕ ಸಾತಪ್ಪನ್ ಮತ್ತು ವಿಶ್ವನಾಥ್ ಅವರ ಗಮನಕ್ಕೆ ತರಲಾಗಿತ್ತು. ಇದಕ್ಕೆ ಸ್ಪಂದಿಸಿದ ಎಸ್‌ಎಲ್‌ಎನ್ ಸಂಸ್ಥೆ, ತನ್ನ ಎಸ್.ಆರ್. ಅನುದಾನದಡಿ ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆ ಕಾಮಗಾರಿಯನ್ನು ಕೈಗೊಂಡು ಪೂರ್ಣಗೊಳಿಸಿದೆ. ರಸ್ತೆ ಕಾಮಗಾರಿ ಉತ್ತಮವಾಗಿ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ರಸ್ತೆ ಕಾಮಗಾರಿ ನಿರ್ವಹಿಸಿದ ಹಿನ್ನೆಲೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ರಫಿ ಅವರು ಎಸ್‌ಎಲ್‌ಎನ್ ಸಂಸ್ಥೆಯ ಮಾಲೀಕರ ನಿವಾಸಕ್ಕೆ ತೆರಳಿ ಚರ್ಚಿಸಿ ಸೇವೆ ಬಗ್ಗೆ ಹರ್ಷ ವ್ಯಕ್ತಪಡಿಸಿದರು.